ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉನ್ನತ ಸಾಧನೆ ಮಾಡಿದವರನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಿ : ಚೈತನ್ಯಾನಂದ ಸ್ವಾಮೀಜಿ

ಕೊಪ್ಪಳ : ಉನ್ನತ ಸಾಧನೆ ಮಾಡಿದವರನ್ನು ಸ್ಫೂರ್ತಿ ಮತ್ತು ಮಾದರಿಯಾಗಿ ತೆಗೆದುಕೊಳ್ಳಬೇಕು ಎಂದು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮ ಶ್ರೀ ಚೈತನ್ಯಾನಂದ ಸ್ವಾಮೀಜಿ ಅವರು ಹೇಳಿದರು.
ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಮಂಗಳವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಿಂದ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆ -2025-26 ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಒಳ್ಳೆಯ ಚಿಂತನೆ ಮತ್ತು ಉತ್ತಮ ಅರೋಗ್ಯ ಇದ್ದರೆ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ. ಎಲ್ಲರಲ್ಲೂ ಬಹಳಷ್ಟು ಶಕ್ತಿ ಇದೆ. ಅದನ್ನು ಉಪಯೋಗ ಮಾಡಿಕೊಳ್ಳಬೇಕು. ಅವಕಾಶಗಳು ಬಹಳಷ್ಟು ಇವೆ. ಅವುಗಳನ್ನು ಉಪಯೋಗ ಮಾಡಿಕೊಳ್ಳಬೇಕು. ಯಾವುದೇ ಕೆಲಸದಲ್ಲಿ ಶ್ರದ್ದೆ ಮತ್ತು ಅಧ್ಯಯನ ಬೇಕು. ಯಶಸ್ವಿ ಅನ್ನುವುದು ಅಂತಿಮ ಘಟ್ಟ ಅಲ್ಲ. ಅದು ಕೇವಲ ಸಂತೋಷ ಅಷ್ಟೇ. ಮನೋರಂಜನೆ ಸೀಮಿತವಾಗಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿರುವ ಬಿ. ಜಿ ಕರಿಗಾರ ಅವರು ಮಾತನಾಡುತ್ತ ಗ್ರಾಮಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸೇವೆ ಮನೋಭಾವನೆ ಇರಬೇಕು. ಸ್ವಚ್ಛತೆ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಮಾತನಾಡುತ್ತ ವಿದ್ಯಾರ್ಥಿಗಳು ತಮ್ಮ ಮನೆ ಮತ್ತು ಗ್ರಾಮಗಳನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನೀವು ಕಠಿಣ ಪರಿಶ್ರಮ ಪಟ್ಟರೆ ಯಶಸ್ವಿ ಖಂಡಿತ ಸಿಗುತ್ತದೆ. ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ನಾವು ನಿಜವಾದ ಭಾರತವನ್ನು ಅರ್ಥ ಮಾಡಿಕೊಳ್ಳಬೇಕಾದರೆ ನಾವು ಹಳ್ಳಿಗಳಿಗೆ ಹೋಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮಲ್ಲಿಕಾರ್ಜುನ, ಡಾ. ಪ್ರದೀಪ್ ಕುಮಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗೊಂಡಬಾಳ ಗ್ರಾಮದ ಮುಖಂಡರಾದ ಸೋಮಶೇಖರಯ್ಯ ವಿರೂಪಾಕ್ಷಯ್ಯ ಇನಾಮದಾರ, ಅದಪ್ಪ ಹಳ್ಳಕೆರಿ, ಬಸಣ್ಣ ಕೋಣಿ, ಕಾಲೇಜಿನ ಉಪನ್ಯಾಸಕರಾದ ಡಾ. ನರಸಿಂಹ, ಶಿವಪ್ರಸಾದ್ ಹಾದಿಮನಿ, ವೀರುಪಾಕ್ಷಿ ಮುತ್ತಾಳ, ಶ್ರೀಕಾಂತ್, ಸಂಗಪ್ಪ ಬ್ಯಾಳಿ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಹಿನ್ ನಿರೂಪಿಸಿದರು. ಭಾಗ್ಯಮ್ಮ ಸ್ವಾಗತಿಸಿದರು. ಭಾನು ಬೇಗಂ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!