ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಬಿ. ಆರ್. ಅಂಬೇಡ್ಕರ್ ಅವರು ಶೋಷಿತರ ದ್ವನಿ : ಡಾ ಗಣಪತಿ ಲಮಾಣಿ


ಕೊಪ್ಪಳ :ಡಾ. ಬಿ. ಆರ್ ಅಂಬೇಡ್ಕರ್ ಶೋಷಿತರ ಪರವಾಗಿ ದ್ವನಿ ಎತ್ತಿ ಹೋರಾಟ ಮಾಡಿ ನ್ಯಾಯ ದೊರಕಿಸಿಕೊಟ್ಟವರು ಎಂದು ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ದಂದು ಹಮ್ಮಿಕೊಂಡಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಿಸಿ ಮಾತನಾಡಿದರು.
ಅವರು ಮುಂದುವರೆದು ಮಾತನಾಡುತ್ತ ಅಂಬೇಡ್ಕರ್ ಅವರ ಜೀವನ ಚೆರಿತ್ರಯ ಕುರಿತು ಎಲ್ಲ ವಿಷಯಗಳಲ್ಲಿ ಪಠ್ಯ ಮಾಡಬೇಕು. ಎಲ್ಲರೂ ಅಂಬೇಡ್ಕರ್ ಅವರ ವಿಚಾರಗಳನ್ನು ಓದಬೇಕು. ಅಂಬೇಡ್ಕರ್ ಅವರು ವರ್ಗ ರಹಿತ ಮತ್ತು ಜಾತಿ ರಹಿತ ಸಮಾಜದ ನಿರ್ಮಾಣ ಆಶಯ ಹೊಂದಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾದ ವಿಠೋಬ ಅವರು ಮಾತನಾಡುತ್ತಾ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರೂ ಸ್ವಯಂ ಪ್ರೇರಣೆಯಿಂದ ಆಚರಣೆ ಮಾಡಬೇಕು.
ಅಂಬೇಡ್ಕರ್ ಅವರು ದೇಶದ ಎಲ್ಲ ವರ್ಗಗಳಿಗೆ ಮೀಸಲಾತಿ ಕೊಟ್ಟಿದ್ದಾರೆ. ಹಾಗೆಯೇ ಎಲ್ಲ ಜಾತಿಯ ಜನರಿಗೆ ಸಂವಿಧಾನದಲ್ಲಿ ಹಕ್ಕುಗಳನ್ನು ನೀಡಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಎಲ್ಲರೂ ಅರ್ಥ ಮಾಡಿಕೊಂಡರೆ ಅರೋಗ್ಯವಂತ ಸಮಾಜ ನಿರ್ಮಾಣ ಆಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಸಹಾಯಕ ಪ್ರಾಧ್ಯಾಪಕ ಡಾ. ನರಸಿಂಹ ಅವರು ಮಾತನಾಡುತ್ತಾ ಡಾ. ಬಿ. ಆರ್ ಅಂಬೇಡ್ಕರ್ ಅವರು ಹುಟ್ಟಿದ ದಿನ ದಲಿತರ ಮತ್ತು ಹಿಂದುಳಿದ ವರ್ಗಗಳ ಚರಿತ್ರೆಯಲ್ಲಿ ಐತಿಹಾಸಿಕ ದಿನ. ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟರು. ಎಲ್ಲ ಶೋಷಿತರು ಶಿಕ್ಷಣ ಪಡೆಯಬೇಕು. ಆಗ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕರಾದ ಡಾ. ಹುಲಿಗೆಮ್ಮ, ಡಾ. ಮಲ್ಲಿಕಾರ್ಜುನ, ಸುಮಯ್ಯ, ಹನುಮಪ್ಪ, ಸಂಗಪ್ಪ ಬ್ಯಾಳಿ, ವೆಂಕಟೇಶ್, ಹಾಗೂ ಕಾಲೇಜಿನ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಹುಲಿಗೆಮ್ಮ ಅವರು ನಿರೂಪಿಸಿ ಸ್ವಾಗತಿಸಿದರು. ಡಾ. ಮಲ್ಲಿಕಾರ್ಜುನ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!