ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿ: ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ – ಲಕ್ಷ್ಮಣ ಸವದಿ ಭೂಮಿ ಪೂಜೆ.

ಬೆಳಗಾವಿ:ಅಥಣಿ ಮತಕ್ಷೇತ್ರದ ಸಪ್ತಸಾಗರ ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ವಿದ್ಯಾನಗರ ಕ್ರಾಸ್‌ನಿಂದ ಸಪ್ತಸಾಗರ ರಸ್ತೆಯವರೆಗೆ ಸುಮಾರು 800 ಲಕ್ಷ ರೂಪಾಯಿ ವೆಚ್ಚದಲ್ಲಿ ಬಾಕ್ಸ್ ಕಲ್ವರ್ಟ್ಸ್, ತಡೆಗೋಡೆ ಹಾಗೂ ರಸ್ತೆ ಎತ್ತರಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ಇದೇ ವೇಳೆ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 90 ಲಕ್ಷ ರೂಪಾಯಿ ವೆಚ್ಚದಲ್ಲಿ ಸಪ್ತಸಾಗರ ಗ್ರಾಮದಿಂದ ಕಮತ ರಸ್ತೆಯವರೆಗೆ 1.5 ಕಿ.ಮೀ. ರಸ್ತೆ ಡಾಂಬರೀಕರಣ ಹಾಗೂ 100 ಲಕ್ಷ ರೂಪಾಯಿ ವೆಚ್ಚದಲ್ಲಿ ಸಪ್ತಸಾಗರದಿಂದ ಸಿದ್ದಾಪುರ ರಸ್ತೆಯ 2.1 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೂ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಗ್ರಾಮಸ್ಥರೊಂದಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಪ್ತಸಾಗರ ಗ್ರಾಮದ ಹಿರಿಯ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!