ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ದೇವದಾಸಿ ಮಹಿಳೆಯರ ಬದುಕಿಗೆ ವಿಶೇಷ ಸ್ಪರ್ಶ ನೀಡಿ: ಸರ್ಕಾರಕ್ಕೆ ರೋಣ ತಹಶೀಲ್ದಾರ್ ಮೂಲಕ ಮನವಿ

ರೋಣ : ದಶಕಗಳ ಕಾಲ ಸಾಮಾಜಿಕ ಶೋಷಣೆಗೆ ಒಳಗಾಗಿ, ಇಂದಿಗೂ ಸಮಾಜದ ಮುಖ್ಯವಾಹಿನಿಗೆ ಬರಲು ಹೋರಾಡುತ್ತಿರುವ ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನ ಮಾಜಿ ದೇವದಾಸಿ ಮಹಿಳೆಯರನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರಿ ಸೌಲಭ್ಯ ನೀಡಬೇಕೆಂದು ಆಗ್ರಹಿಸಿ ಇಂದು ಮನವಿ ಸಲ್ಲಿಸಲಾಯಿತು.

ವಿಮುಕ್ತಿ ವಿಮುಕ್ತ ದೇವದಾಸಿ ಮಹಿಳಾ ಕರ್ನಾಟಕ ವೇದಿಕೆಯ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು, ಕೆ. ನಾಗರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿ ತಮ್ಮ ಅಳಲನ್ನು ತೋಡಿಕೊಂಡರು.

ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಭಿಷೇಕ್ ಕೊಪ್ಪದ್ ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕೆಂಬ ಹಂಬಲ ಹೊಂದಿರುವ ಈ ಸಮುದಾಯದ ಮಹಿಳೆಯರು ಇಂದಿಗೂ ಅತ್ಯಂತ ಬಡತನ ಮತ್ತು ಅಸಮಾನತೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇವರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ಇವರ ಸಾಮಾಜಿಕ ಹಿನ್ನೆಲೆಯನ್ನು ಗಮನಿಸಿ ವಿಶೇಷ ಘಟಕ ಯೋಜನೆ’ (SCP) ಅಡಿ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಮನೆ ಇಲ್ಲದ ಮಾಜಿ ದೇವದಾಸಿ ಮಹಿಳೆಯರಿಗೆ ಸರ್ಕಾರಿ ಜಮೀನು ಗುರುತಿಸಿ ತಕ್ಷಣವೇ ಹಕ್ಕುಪತ್ರ ನೀಡಬೇಕು ಹಾಗೂ ಬಿಪಿಎಲ್ ಕಾರ್ಡ್ ಮತ್ತು ಮಾಸಾಶನ ವಿಳಂಬವಿಲ್ಲದೆ ತಲುಪಿಸಬೇಕು. ಮಾಜಿ ದೇವದಾಸಿ ಮಹಿಳೆಯರ ಮಕ್ಕಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ನೀಡಬೇಕು. ಸರ್ಕಾರಿ ನಿಗಮಗಳ ಮೂಲಕ ದೊರೆಯುವ ಸ್ವಯಂ ಉದ್ಯೋಗ ಸಾಲಗಳಲ್ಲಿ ಶೇ. 100 ರಷ್ಟು ಆದ್ಯತೆ ನೀಡಬೇಕು. ದೇವದಾಸಿ ಸಮುದಾಯದಿಂದ ಬರುವ ಅರ್ಜಿಗಳನ್ನು ಸಾಮಾನ್ಯ ಅರ್ಜಿಗಳಂತೆ ಪರಿಗಣಿಸದೆ, ವಿಶೇಷ ಆದ್ಯತೆಯ ಮೇಲೆ ವಿಲೇವಾರಿ ಮಾಡಲು ಜಿಲ್ಲಾಡಳಿತ ಸೂಚನೆ ನೀಡಬೇಕು.
ಇದೆ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಗೌರವ ಹಿರೇಮನಿ, ಸಿದ್ದವ್ವ ಮಾದರ, ಮಂಜುಳಾ ತೆಗೀಮನಿ, ಯಲ್ಲವ್ವ ತಗ್ಗಿನಮಣಿ, ಮುದುಕವ್ವ ಕೊತಬಾಳ, ಎಲ್ಲಮ್ಮ ಚಲವಾದಿ, ರೇವಪ್ಪ ಕೆಂಗರ ಸೇರಿದಂತೆ ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನ ನೂರಾರು ಮಹಿಳೆಯರು ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!