ಹನೂರು: ಸಂಘದ ಅಧ್ಯಕ್ಷ ಶಿಕ್ಷಕ ಗುರುಸ್ವಾಮಿ.
ಹನೂರು :ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಿನಾಂಕ 01 -3 -2023 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲೂಕು ಯೋಜನೆ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ “ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ”ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪತ್ತೆಗಳ ಪರಿಸ್ತರಣೆ ಮತ್ತು ಪ್ರಿ-ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ದಿನಾಂಕ 1-3-2023ರಿಂದ ಅನಿರ್ದಿಷ್ಟ ಅವಧಿ ಪುಷ್ಕರಕ್ಕೆ ಕರೆ ನೀಡಲು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯದ 2023 24ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಸ್ಕಾರಣೆ ಸಂಭವಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ದಿನಾಂಕ 01 -07 2022 ರಿಂದ ಜಾರಿಗೊಳಿಸಬೇಕಾಗಿತ್ತು.
ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಿದ್ದು. ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಸ್ಕಾರಣೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು.
ರಾಜ್ಯ ಸರ್ಕಾರದ ಅಧಿಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ ನ್ಯಾಯ ಸಮ್ಮತ ಹಕ್ಕಾಗಿದ್ದು ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಸರ್ಕಾರ ನಿರ್ಲಕ್ಷ ವಹಿಸಿರುವುದಕ್ಕೆ ಸಭೆಯು ಓಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವರದಿ:ಉಸ್ಮಾನ್ ಖಾನ್