ಬಾಗಲಕೋಟೆ/ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರಾತ್ರಿ 8.15 ಕ್ಕೆ 99 ನೇ ತತ್ವದಶ೯ನ, ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮ ಜರುಗಲಿದೆ. ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಾನಿಧ್ಯದಲ್ಲಿ ಸದ್ಗುರು ಶ್ರೀ ಸಿದ್ಧಾರೂಢರ ಪಾರಾಯಣ, ಭಜನೆ, ಓಂಕಾರ, ಮಂಗಲ, ಪ್ರಸಾದ ಜರುಗಲಿದೆ ಎಂದು ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಮುಖಂಡ ಎಲ್. ಶ್ರೀನಿವಾಸ್ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















