ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಮನ್ ವೆಲ್ತ್ ಲೀಗಲ್ ಎಜುಕೇಶನ್ ವತಿಯಿಂದ ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ಕೊಡಗು : ಕಾಮನ್ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು ನಾವೀನ್ಯತೆಯನ್ನು ಮರುರೂಪಿಸುವುದು ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು.
ಈ ಸಮ್ಮೇಳವನ್ನು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ಸೂರ್ಯ ಕಾಂತ್ ರವರು ಉದ್ಘಾಟಿಸಿ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಮುಖ್ಯ ಸಲಹೆಗಾರರಾದ ಗೌರವಾನ್ವಿತ ನ್ಯಾಯಮೂರ್ತಿ ವಿಭು ಬಖ್ರು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಭಾರತೀಯ ಕಾನೂನು ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಮತ್ತು ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಡಾ. ಎಸ್. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಸಮ್ಮೇಳನ ಆಯೋಜನಾ ಸಮಿತಿಯ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಡಿ.ಕೆ. ಸಿಂಗ್ ರವರು ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
ಬಳಿಕ ಇಂದು ಸಂಜೆ 05 15 ಗಂಟೆಗೆ ಶಕ್ತಿ, ಕೃತಕ ಬುದ್ಧಿಮತ್ತೆ ಮತ್ತು ಶಕ್ತಿ ವ್ಯವಸ್ಥೆಗಳ ಡಿಜಿಟಲೀಕರಣ ಹಾಗೂ ವಿವಿಧ ವಿಷಯಗಳ ಕುರಿತು ಕರ್ನಾಟಕದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ರವರು ವಿಚಾರ ಸಂಕಿರಣದಲ್ಲಿ ವಿಷಯವನ್ನು ಮಂಡಿಸಲಿದ್ದಾರೆ.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!