ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ” ಶ್ರಮಿಕ ವಸತಿ ಶಾಲೆ ” ಭೂಮಿ ಪೂಜೆ ಶಾಸಕ ಲಕ್ಷ್ಮಣ ಸವದಿ ಅವರಿಂದ ಚಾಲನೆ.

ಬೆಳಗಾವಿ/ ಅಥಣಿ: ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ ಅಥಣಿ ತಾಲೂಕಿನಲ್ಲಿ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣ ಕಾಮಗಾರಿಗೆ ರವಿವಾರ ಭೂಮಿ ಪೂಜೆ ನೆರವೇರಿತು.
ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಶಾಸಕ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರು ಈ ಯೋಜನೆಗೆ ಚಾಲನೆ ನೀಡಿದರು.

ಪಟ್ಟಣದ ಸತ್ತಿ ರಸ್ತೆ ಸಮೀಪ, ಆರ್‌ಟಿಒ ಕಚೇರಿ ಹಾಗೂ ಚಿಕ್ಕಟ್ಟಿ ಡಿಪ್ಲೊಮಾ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ 8 ಎಕರೆ ಪ್ರದೇಶದಲ್ಲಿ ಸುಮಾರು 36.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ವಸತಿ ಶಾಲೆ ನಿರ್ಮಾಣವಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, “ತಾಲೂಕಿನಲ್ಲಿ ಸಾವಿರಾರು ಕಾರ್ಮಿಕರು ಇದ್ದಾರೆ. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬುದು ನಮ್ಮ ಉದ್ದೇಶ. ಈ ವಸತಿ ಶಾಲೆಯಲ್ಲಿ 6ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ, ವಸತಿ ಮತ್ತು ಊಟ ವ್ಯವಸ್ಥೆ ಕಲ್ಪಿಸಲಾಗುತ್ತದೆ. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ,” ಎಂದು ಹೇಳಿದರು.

“ ಶಿಕ್ಷಣವು ಹುಲಿ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು . ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನಂತೆ ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಮುಖ್ಯ ಸಾಧನ,” ಎಂದು ಅವರು ಹೇಳಿದರು. ಈಗಾಗಲೇ ಕೋಕಟನೂರ, ಸತ್ತಿ ಮತ್ತು ಕೊಹಳ್ಳಿಯಲ್ಲಿ ಕೆಪಿಎಸ್ ಶಾಲೆಗಳು ಪ್ರಾರಂಭವಾಗಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಪಿಯುಸಿವರೆಗೆ ಶಿಕ್ಷಣ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನಲ್ಲಿ ಶೈಕ್ಷಣಿಕ ವಿಸ್ತರಣೆಗಾಗಿ 9 ಪ್ರೌಢಶಾಲೆಗಳು ಆರಂಭಗೊಂಡಿದ್ದು, ಇನ್ನೂ 5 ಶಾಲೆಗಳು ಶೀಘ್ರದಲ್ಲೇ ಮಂಜೂರಾಗಲಿವೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೊರಾರ್ಜಿ ಮತ್ತು ಮೌಲಾನಾ ಆಜಾದ್ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರೀಯ ವಿದ್ಯಾಲಯವೂ ಪ್ರಾರಂಭವಾಗಿದೆ ಎಂದು ಹೇಳಿದರು.

ಇದರ ಜೊತೆಗೆ, ಅಥಣಿ ಪಟ್ಟಣದ ಸಂಚಾರ ವ್ಯವಸ್ಥೆ ಸುಧಾರಣೆಗೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ 24 ಲಕ್ಷ ರೂ. ಅನುದಾನ ನೀಡಲಾಗಿದ್ದು, ಅಂಬೇಡ್ಕರ್ ವೃತ್ತದಲ್ಲಿ AI ಆಧಾರಿತ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸಲು ಸಹಾಯವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಥಣಿ ಶೆಟ್ಟರ ಮಠದ ಪೂಜ್ಯ ಶ್ರೀ ಮರುಳಸಿದ್ಧ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ದತ್ತ ವಾಸ್ಟರ್, ಅಥಣಿ ಪುರಸಭೆಯ ಉಪಾಧ್ಯಕ್ಷರಾದ ಭುವನೇಶ್ವರಿ ಯಂಕಂಚಿ, ಜಿಲ್ಲಾ ಕಾರ್ಮಿಕ ನಿರೀಕ್ಷಕರಾದ ಮಲ್ಲಿಕಾರ್ಜುನ್ ಜೋಗೇರಿ, ಉಪ ಆಯುಕ್ತ ಪಿ ಜಿ ನಾಗೇಶ್, ಕಾರ್ಮಿಕ ಇಲಾಖೆ ತಾಲೂಕ ಅಧಿಕಾರಿ ಭುವನೇಶ್ವರಿ ಡಾಲಿ, ಸಂತೋಷ್ ಸಾವಡಕರ್ , ರಾಜು ಗುಡೋಡಗಿ , ಸೈಯದ್ ಅಮೀನ್ ಗದ್ಯಾಳ್ , ರಿಯಾಜ್ ಸನದಿ ಆಸಿಫ್ ತಾಂಬೋಳಿ, ಇನ್ನೂ ಅನೇಕ ಮುಖಂಡರು, ಪುರಸಭೆ ಸದಸ್ಯರು, ಅಧಿಕಾರಿಗಳು ಹಾಗೂ ಹಲವು ಗಣ್ಯರು ಭಾಗವಹಿಸಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!