ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ಕ.ರ.ಸಾ. ನಿಗಮದ ಕೇಂದ್ರ ಕಛೇರಿಯಲ್ಲಿ ಅದ್ದೂರಿಯಾಗಿ ಡಾ || ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ : ” ಅರಳಿ ಬಾ ಮರಳಿ ” ಕೃತಿ ಬಿಡುಗಡೆ.

ಕಲಬುರಗಿ : ದಿ. 14.04.2026 ರಂದು ಜರುಗಿದ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಡಾ|| ಬಿ. ಆರ್. ಅಂಬೇಡ್ಕರ್ ಅವರ ಕುರಿತು ರಚಿಸಿದ ಕಲಬುರಗಿಯ ಡಾ|| ಶಿವಕುಮಾರ. ಲಾ. ಸೂರ್ಯವಂಶ ಅವರ “ಅರಳಿ ಬಾ ಮರಳಿ” ಕವನ ಸಂಕಲನ ಕೃತಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದ ಉದ್ಘಾಟಕರಾದ ಶ್ರೀ ಅರುಣಕುಮಾರ. ಎಂ.ವೈ. ಪಾಟೀಲ್, ಮಾನ್ಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಹಾಗೂ ಶ್ರೀಮತಿ, ಡಾ|| ಬಿ. ಸುಶೀಲಾ, ವ್ಯವಸ್ಥಾಪಕ ನಿರ್ದೇಶಕರು, (ಭಾ.ಆ.ಸೇ.) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಇವರು ಕೃತಿ ಬಿಡುಗಡೆಗೊಳಿಸಿದರು.
ಇದೇ ವೇದಿಕೆಯಲ್ಲಿ ಸಾಹಿತಿ ಸಂಜಯ್ ಮಾಕಲ್, ಕಾರ್ಮಿಕ ಮುಖಂಡರಾದ ಶ್ರೀ ಚಂದ್ರಕಾಂತ ಗದ್ದಗಿ, ಶ್ರೀ ರಾಜಕುಮಾರ. ಎಂ. ಗೌತಮ್, ಶ್ರೀ ಮಾರುತಿ ಶಾಖಾ, ಶ್ರೀ ದೇವರಾಜ ಚೌರ್, ನಿಗಮದ ಹಿರಿಯ ಅಧಿಕಾರಿಗಳಾದ ಶ್ರೀ ಚಂದ್ರಕಾಂತ ಫುಲೇಕರ್, ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಶ್ರೀ ಬಸವರಾಜ. ಸಿ. ಬೆಳಗಾವಿ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು, ಶ್ರೀ ಸಂತೋಷಕುಮಾರ ಗೊಗೇರಿ, ಮುಖ್ಯ ಯಾಂತ್ರಿಕ ಅಭಿಯಂತರರು ಶ್ರೀ, ವಿ. ಎಚ್. ಸಂತೋಷಕುಮಾರ, ಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಶ್ರೀ ಮಹಿಪಾಲ.ಎಸ್. ಬೇಗಾರ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಮತ್ತಿತರರು ಹಾಜರಿದ್ದರು.
ಕಾರ್ಯಕ್ರಮದ ನಿರೂಪಕರಾದ ಶ್ರೀ ವೀರಭದ್ರಪ್ಪ ಅವರು ಕೃತಿಯ ಕುರಿತು ಮಾತನಾಡಿ, ಒತ್ತಡ, ಕೆಲಸ ಕಾರ್ಯಗಳ ಮಧ್ಯ ಕೃತಿ ರಚಿಸುವುದು ಸಾಮಾನ್ಯ ಕೆಲಸವೇನಲ್ಲ. ಇದು ಒಂದು ಸಾಧನೆಯೇ ಸರಿ. ಇವರ 20 ವರ್ಷದ ಸಾಹಿತ್ಯ ಸಾಧನೆಗೆ ಇನ್ನಷ್ಟು ಪ್ರೋತ್ಸಾಹ ಮತ್ತು ಪುರಸ್ಕಾರ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಕೊನೆಗೆ ಡಾ|| ಶಿವಕುಮಾರ. ಲಾ. ಸೂರ್ಯವಂಶ ಅವರಿಗೆ ಮುಖ್ಯ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!