ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಡಾಕ್ಟರ್ ಅಬ್ದುಲ್ ಕಲಾಂ ಎಸ್ ಪಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 893ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತೋತ್ಸವವನ್ನು ಆಚರಿಸಲಾಯಿತು. ಫೌಂಡೇಶನ್ ಕಾರ್ಯದರ್ಶಿಗಳಾದ ಎಚ್, ಪೀರಾವಲಿ ಮಾತನಾಡಿ ಬಸವಣ್ಣ ಕಾಯಕತತ್ವವನ್ನು ಬೋಧಿಸಿದ್ದಾರೆ, ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದವರು. ಹೀಗೆ ತಮ್ಮ ವಚನಗಳ ಮೂಲಕವೇ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಈ ಮಹಾನ್ ವ್ಯಕ್ತಿಯಾಗಿದ್ದಾರೆ ಕಾಯಕದ ನಿಷ್ಠೆಯನ್ನ ನಾವೆಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರಾಟೆ ಮಾಸ್ಟರ್ ರಾಜಾಭಕ್ಷಿ ದೇವರ ಮನೆ ಸಾಧಕಲಿ ಎಸ್ ಪಿ ಕೋಚಿಂಗ್ ಸೆಂಟರ್ ಅಲ್ಲಿ ತರಬೇತಿಯನ್ನು ಪಡೆಯುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















