ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ, ಭಕ್ತ ಕನಕದಾಸರ ಮಹಾದ್ವಾರ ಉದ್ಘಾಟನೆ ಹಾಗೂ ಧರ್ಮಸಭಾ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾದ್ವಾರವನ್ನು ಉದ್ಘಾಟಿಸಿದರು. ನಂತರ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ದೇವಸ್ಥಾನಗಳು ಸಮಾಜದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು.
ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಭಕ್ತ ಕನಕದಾಸರ ಮಹಾದ್ವಾರ ಉದ್ಘಾಟನೆಯು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಅನೇಕ ಗಣ್ಯರು, ಜನಪ್ರತಿನಿಧಿಗಳು, ದೇವಸ್ಥಾನ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ನಿಟ್ಟೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮವು ಭಕ್ತಿ, ಸಂಪ್ರದಾಯ ಮತ್ತು ಸಾಂಸ್ಕೃತಿಕ ವೈಭವದ ಸಂಕೇತವಾಗಿ ಗಮನ ಸೆಳೆಯಿತು.
ವರದಿ ಬಸವರಾಜ ಎಸ್. ಎನ್.




















