ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಕೊಡುವ ದಂಧೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ಯಾದಗಿರಿ: ಶಹಾಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಕೊಡುವ ದಂಧೆ ಕುರಿತು ತಹಶೀಲ್ದಾರರಿಗೆ ಸಲ್ಲಿಸಿದ ಮನವಿಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವ ಕುರಿತು
ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯ ವತಿಯಿಂದ ದಿ. :೨೪-೦೩-೨೦೨೬ ರಂದು ಶಹಾಪುರ ತಹಶೀಲ್ದಾರರು / ಆಹಾರ ಇಲಾಖೆ ಅಧಿಕಾರಿಗಳಿಗೆ ಅಕ್ರಮವಾಗಿ ರೇಷನ್ ಕಾರ್ಡ್ ಅನರ್ಹರಿಗೆ ಮಾಡಿಕೊಡುತ್ತಿರುವ ಕುರಿತು ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಇಂದಿನವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗದೇ ಇರುವುದು ಹಾಗೂ ಯಾವುದೇ ಸ್ಪಂದನೆ ದೊರಕದಿರುವುದು ವಿಷಾದನೀಯವಾಗಿದೆ. ಶಹಾಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಕೊಡುವ ದಂಧೆ ನಡೆಯುತ್ತಿದ್ದು, ಸಂಬಂಧಪಟ್ಟ ಕೆಲ ಅಧಿಕಾರಿಗಳ ಸಹಕಾರದಿಂದಲೇ ಈ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಬಡಜನರಿಂದ ಸಾವಿರಾರು ರೂಪಾಯಿ ವಸೂಲಿ ಮಾಡಿ ರೇಷನ್ ಕಾರ್ಡ್ ಅಕ್ರಮವಾಗಿ ಮಾಡಿಕೊಡಲಾಗುತ್ತಿದೆ.
ಈ ಕುರಿತು ಈಗಾಗಲೇ ಸಲ್ಲಿಸಿದ ಮನವಿಯಲ್ಲಿ ವಿವರಗಳನ್ನು ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಶಹಾಪುರ ನಗರದ ಚಾವೂಸ್ ಕಾಂಪ್ಲೇಕ್ಸ್ ಲ್ಲಿರುವ ಎಂ.ಡಿ ಆನ್ ಲೈನ್ ಸೆಂಟರ್ ಮಾಲೀಕರಾದ ಸಿರಾಜ್ ಇವರಿಂದ ಈ ಅಕ್ರಮ ನಡೆದಿರುತ್ತದೆ. ಆದ್ದರಿಂದ, ದಯವಿಟ್ಟು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರವನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಅಕ್ರಮಗಳು ಮುಂದುವರಿಯದಂತೆ ತಕ್ಷಣ ಕ್ರಮ ಜರುಗಿಸುವಂತೆ ವಿನಂತಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!