ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ವ ಧರ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ – ಸುಧೀರ್ ಹಂಗಳೂರ್

ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ವಾರ್ಡ ನಂ. 3 ರಲ್ಲಿ ಇರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜೂರಾತಿಗೊಂಡ 2,00,000/- (ಎರಡು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಸುಧೀರ್ ಹಂಗಳೂರ್ ವಿತರಿಸಿದರು.

ನಂತರ ಮಾತನಾಡಿದ ಅವರು ಸರ್ವ ಧರ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅಪಾರವಾದದ್ದು, ಧಾರ್ಮಿಕ ಕೇಂದ್ರಗಳಲ್ಲಿ ಶ್ರದ್ಧೆ ಮತ್ತು ಭಕ್ತಿ ಭಾವ, ಆಧ್ಯಾತ್ಮಿಕತೆ ಹೆಚ್ಚಿಸಲು ಹಳೆಯ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದ್ದು, ರಾಜ್ಯಾದ್ಯಾಂತ ಸಾವಿರಾರು ದೇವಸ್ಥಾನಗಳು, ಮಸೀದಿಗಳು, ಚರ್ಚ್‌ಗಳ ಜೀರ್ಣೋದ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ಸಿರುಗುಪ್ಪ ತಾಲೂಕಿನಲ್ಲಿ 362 ದೇವಸ್ಥಾನ, ಮಸೀದಿ, ಚರ್ಚ್‌ಗಳ ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಮಾಡುವುದರ ಜೊತೆಗೆ ದೇವಸ್ಥಾನಗಳಲ್ಲಿ ಕಸ ವಿಲೇವಾರಿಗೆ ಪರಿಕರಗಳನ್ನು ವಿತರಿಸಲಾಗಿದೆ ಇದರಿಂದ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸ್ವಚ್ಚತೆಯಿಂದ ಇರುವಂತೆ ನೋಡಿಕೊಳ್ಳಲು ಶ್ರಮಿಸಲಾಗುತ್ತಿದೆ .
ಶ್ರೀ ಕ್ಷೇತ್ರ ಧರ್ಮಸ್ಥಳ ರಾಜ್ಯಾದ್ಯಂತ ಧಾರ್ಮಿಕ ಕ್ರಾಂತಿ ಮಾಡುತ್ತಿದೆ, ಇಲ್ಲಿ ಯಾವುದೇ ಜಾತಿ ಧರ್ಮದ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದೆ, ಸಾಮಾಜಿಕ ಕಳಕಳಿಯ ಕೆಲಸಗಳು ಇನ್ನೂ ಸದಾಕಾಲ ನಡೆಯುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಪೂಜಾರಿ ಹಗರೆಪ್ಪ, ಉಪಾಧ್ಯಕ್ಷ ಪೂಜಾರಿ ಯಲ್ಲಪ್ಪ, ಖಜಾಂಚಿ ಪೂಜಾರಿ ಮಂಜುನಾಥ, ಗೋಪಾಲ ಮತ್ತು ಸದಸ್ಯಪೂಜಾರಿ ಯಲ್ಲಪ್ಪ, ದೊಡ್ಡ ಯಲ್ಲಪ್ಪ, ದೊಡ್ಡ ಬೀರಪ್ಪ, ಪುಟ್ಟಪ್ಪ, ನಾಗಪ್ಪ, ಪಂಪಾಪತಿ, ಬಸವರಾಜ ಹಾಗೂ ಊರಿನ ಮುಖಂಡ ಕೆ ಚಂದ್ರಶೇಖರ, ವೀರಭದ್ರ ಗೌಡ ದೇವಲಾಪುರ, ಚಿದಾನಂದಪ್ಪ, ಬೆನಕರಾಜ ಡಿ ಎಸ್, ಪ್ರಸಾದ್ ಡಿ, ಮುದುಕಪ್ಪ, ಮೇಲ್ವಿಚಾರಕ ಬೀರಪ್ಪ, ಸೇವಾಪ್ರತಿನಿಧಿ ವಾಣಿ, ಅಜೇಯ ಮತ್ತು ಊರಿನ ಮುಖಂಡರು ಉಪಸ್ಥಿತರಿದ್ದರು.

ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!