ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಬ್ರದರ್ಸ್‌, 1.5 ತಾಸು ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ಸಂಪುಟ ಪುನರ್ ರಚನೆ, ಸಿಎಂ ಬದಲಾವಣೆ ಚರ್ಚೆ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದರು. ಸಹೋದರ ಡಿ.ಕೆ.ಸುರೇಶ್‌ ಜೊತೆ ಶುಕ್ರವಾರ ಸಂಜೆ ದೆಹಲಿಯ ರಾಜಾಜಿಮಾರ್ಗದಲ್ಲಿರುವ ಖರ್ಗೆಯವರ ನಿವಾಸಕ್ಕೆ ತೆರಳಿದ ಡಿಕೆಶಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ನಿವಾಸದಲ್ಲಿ ಕಳೆದರು. ಭೇಟಿ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು ಎನ್ನಲಾಗಿದೆ. ಆದರೆ, ಮಾತುಕತೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಿಕೆಶಿ ನಿರಾಕರಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!