ಬಳ್ಳಾರಿ : ಜೈಲಿನಲ್ಲಿದ್ದ ಆರೋಪಿಯೊಬ್ಬನು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯಿಂದ ಪರಾರಿಯಾದ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹರಪನಹಳ್ಳಿ ಮೂಲದ ಅಣ್ಣಪ್ಪ ಎಂಬ ಆರೋಪಿ, ಜೈಲಿನೊಳಗಿದ್ದ ವೇಳೆ ಮಧ್ಯಾಹ್ನ ಮರದ ಮೇಲಿಂದ ಬಿದ್ದು ಗಾಯಗೊಂಡಿದ್ದನು. ಗಾಯಗೊಂಡ ವಿಐಎಮ್ಸ್ (VIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆರೋಪಿ ಬಾತ್ರೂಮ್ಗೆ ತೆರಳಿದ ಬಳಿಕ, ಅಲ್ಲಿ ಕಿಟಕಿಯ ಗ್ಲಾಸ್ ಒಡೆದು ತಪ್ಪಿಸಿಕೊಂಡಿರುವುದು ತಿಳಿದುಬಂದಿದೆ.
ವಿಭಾಗ-7th ಹಿನ್ನೆಲೆ ಅವರನ್ನು ತಕ್ಷಣವೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೆಲಕಾಲದ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡರು.
ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದಲ್ಲಿ ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಹಿನ್ನೆಲೆ ಆಸ್ಪತ್ರೆ ಹಾಗೂ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಎದ್ದಿದ್ದು, ಆರೋಪಿ ಹೇಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ವರದಿ : ಜಿಲಾನಸಾಬ್ ಬಡಿಗೇರ್




















