ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬದಲಾವಣೆ ಸೂಚನೆ: ಈಶ್ವರಪ್ಪ ಎಚ್ಚರಿಕೆ

ಬಳ್ಳಾರಿ : ಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಭಾರೀ ಬದಲಾವಣೆ ಕಾಣಿಸಿಕ ಗೊಳ್ಳಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ನಗರದ ಅತಿಥಿ ಗೃಹದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಗುಂಪುಗಳ ನಡುವೆ ಶಿಸ್ತು ಮೀರಿ ನಡೆದುಕೊಳ್ಳುತ್ತಿ ರುವುದಾಗಿ ಆರೋಪಿಸಿದರು. ದಾವಣಗೆರೆ ಉಪಚುನಾವ ಣೆಯ ವೇಳೆ ಕಾಂಗ್ರೆಸ್‌ನ ಅನೇಕ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಅವರ ನ್ನು ಪಕ್ಷದಿಂದ ಹೊರಹಾಕ ಲಾಗಿದೆ. ಇದಕ್ಕೆ ಮುಸ್ಲಿಂ ಧಾರ್ಮಿಕ ಮುಖಂಡರು
ವಿರೋಧ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದರೂ, ಪಕ್ಷದ ಹಿರಿಯರು ಅದನ್ನು ಖಂಡಿಸಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ದೇಶದ ಜನತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ ಈಶ್ವರಪ್ಪ, ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಮಹಿಳೆಯರಿಗೆ ಮಾಡಿದ ಅಪಮಾನ ಎಂದರು.

ಬಿಜೆಪಿಯಲ್ಲಿ ಹಿಂದುತ್ವಕ್ಕೆ ಸೂಕ್ತ ಸ್ಥಾನಮಾನ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಾತಿ ಆಧಾರಿತ ರಾಜಕಾರಣ ಹೆಚ್ಚುತ್ತಿರುವುದ ‘ರಿಂದ ಪಕ್ಷದಲ್ಲಿ ಶುದ್ದೀಕರಣ ಅಗತ್ಯವಿದೆ. ಶೀಘ್ರದಲ್ಲೇ ಅದು ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅವರ ಸನ್ಮಾನ ಸಮಾರಂಭಕ್ಕೆ ಆಹ್ವಾನ ಬಂದರೆ ಸ್ನೇಹಿತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳು ಅವರವುದಾಗಿ ಹೇಳಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!