ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗು ಜಿಲ್ಲೆಯ ಹೋಂಸ್ಟೇ, ಹೋಟೆಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ

ಮಡಿಕೇರಿ : ಜಿಲ್ಲೆಯ ಹೋಂಸ್ಟೇ, ಹೋಟೆಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಹೋಂಸ್ಟೇ, ರೆಸಾರ್ಟ್ ಮತ್ತು ಹೋಟೆಲ್ಗಳ ಕ್ರಮಬದ್ದವಾದ ನೋಂದಣಿ, ಪ್ರವಾಸಿಗರ ಸುರಕ್ಷತೆ ಮತ್ತು ಅಗತ್ಯ ಮಾಹಿತಿಗಳನ್ನು ಪಡೆಯುವಿಕೆ , ಕಾರ್ಮಿಕರ ಗುಣ ನಡತೆ ಪರಿಶೀಲನೆ ಮತ್ತು ಸುರಕ್ಷತೆ, ಅಗತ್ಯ ದಾಖಲಾತಿಗಳ ಪೂರೈಕೆ, ಆಹಾರ ಪದಾರ್ಥಗಳ ಗುಣಮಟ್ಟ , ಕೆಲಸದ ಪ್ರದೇಶಗಳಲ್ಲಿನ ಸ್ವಚ್ಚತೆ ಮತ್ತು ನೈರ್ಮಲ್ಯತೆ ಕಾಪಾಡುವ ಕುರಿತು , ಸಮಯಕ್ಕೆ ಸರಿಯಾಗಿ ಕಾರ್ಮಿಕರ ಸಂಬಳ ಪಾವತಿ , ಸರ್ಕಾರಿ ನೀತಿ_ ನಿಯಮಗಳ ಪಾಲನೆ , ಅಧಿಕೃತ ನಾಮಫಲಕಗಳ ಬಳಕೆ , ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವುದು ಮತ್ತು ಅಂತಹ ಸಂಸ್ಥೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದು, ಮತ್ತು ವಿದೇಶೀ ಪ್ರವಾಸಿಗರ ನೋಂದಣಿ , ಪ್ರವಾಸಿಗರ ಮೇಲಿನ ದೌರ್ಜನ್ಯಗಳ ತಡೆಗಟ್ಟುವಿಕೆ ಮುಂತಾದ ಗಂಭೀರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ಶ್ರೀ ನಿತಿನ್ ಚಕ್ಕಿ, ಕೆಎಎಸ್, ಪ್ರವಾಸೋದ್ಯಮ ಇಲಾಖೆ ಮತ್ತು ವಾರ್ತಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!