ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಅನುದಾನಿತ ಶ್ರೀ ಶಂಕರಲಿಂಗ ಪ್ರೌಢಶಾಲೆಯ ವಿದ್ಯಾರ್ಥಿನಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಡೆಸಿದ 2026 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕುಮಾರಿ ರೋಹಿಣಿ ಶಿಂಧೆ 625 ಕ್ಕೇ 602 ಅಂಕ(97%) ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಹಾಗೂ ಕುಮಾರ್ ಅಂಬರೀಷ್ ಶೇರಿಕಾರ್ (94%) ದ್ವಿತೀಯ ಸ್ಥಾನ, ಕುಮಾರಿ ರಮಾಬಾಯಿ ಮೇಲಿನಮನಿ (93%) ಶಾಲೆಗೆ ತೃತೀಯ ಸ್ಥಾನ ಪಡೆದು ಶ್ರೀ ಶಂಕರಲಿಂಗ ಪ್ರೌಢಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಆದ ಕಾರಣ ಇವರಿಗೆ ಶಾಲಾ ಆಡಳಿತ ಮಂಡಳಿಯವರು ಮತ್ತು ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಹಾಗೂ ಊರಿನ ಗಣ್ಯರು ಮತ್ತು ಗ್ರಾಮಸ್ಥರು ಸೇರಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.



















