ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯದಲ್ಲಿ 2 ದಿನ 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆರೆಂಜ್‌ ಅಲರ್ಟ್‌! ತಾಪಮಾನ 2 ಡಿಗ್ರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 24 ಹಾಗೂ 25 ರಂದು ಹವಾಮಾನದಲ್ಲಿ ಭಾರಿ ಬದಲಾವಣೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಹಿನ್ನೆಲೆ ಆರೆಂಜ್ ಅಲರ್ಟ್‌ ನೀಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಹಿನ್ನೆಲೆ ಮೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 24) ಮತ್ತು ನಾಳೆ (ಏಪ್ರಿಲ್ 25) ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!