ಬಳ್ಳಾರಿ / ಕಂಪ್ಲಿ : 2025-26 ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪಟ್ಟಣದ ಚೇತನಾ ವಿದ್ಯಾನಿಕೇತನ ಶಾಲೆಯು ಶೇ.98 ಫಲಿತಾಂಶದ ಸಾಧನೆ ಮಾಡಿದೆ.
ಪರೀಕ್ಷೆಗೆ ಕುಳಿತ 45 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 17 ಪ್ರಥಮ ದರ್ಜೆ, 4 ದ್ವಿತೀಯ ಹಾಗೂ 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಸಾಧನೆಯೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿ ಎಚ್.ವಿಜಯರಾಘವೇಂದ್ರ 614 ಅಂಕದೊಂದಿಗೆ ಶಾಲೆಯಲ್ಲಿ ಪ್ರಥಮ ಸ್ಥಾನದ ಸಾಧನೆಗೈದಿದ್ದಾನೆ. ಮತ್ತು ಅನುಜ್ಞಾ 613, ಎಸ್.ಗೌತಮಿ 601, ಪಿ.ಸುಹಾನ 599, ಕೆ.ಶಿವಸಾಯಿ ವಿವೇಕ್ 597 ಅಂಕಗಳಿಸಿದ್ದಾರೆ. ಆರು ವಿದ್ಯಾರ್ಥಿಗಳು ಕನ್ನಡದಲ್ಲಿ, ಮೂವರು ವಿದ್ಯಾರ್ಥಿಗಳು ಹಿಂದಿಯಲ್ಲಿ, ಒಬ್ಬ ವಿದ್ಯಾರ್ಥಿ ಸಮಾಜದಲ್ಲಿ ಪೂರ್ಣ ಅಂಕ ಪಡೆದಿದ್ದಾರೆ ಎಂದು ಚೇತನಾ ಟ್ರಸ್ಟ್ ಅಧ್ಯಕ್ಷ ಜಿ.ಶ್ರೀನಿವಾಸ್, ಉಪ ಪ್ರಾಚಾರ್ಯೆ ಜಯಲಕ್ಷ್ಮಿ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದದವರು, ಪೋಷಕರು, ಶಿಕ್ಷಣ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















