ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಮತ್ತು ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನದ ಸಾಧನೆಗೈದ ವಿದ್ಯಾರ್ಥಿನಿ ಎಂ.ಝುಹಾ ಫಾತಿಮಾ


ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಂಪ್ಲಿ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಿದ್ಯಾಸಾಗರ ರೆಸಿಡೆನ್ಸಿಯಲ್ ಹೈಸ್ಕೂಲ್ ವಿದ್ಯಾರ್ಥಿನಿ ಎಂ.ಝುಹಾ ಫಾತಿಮಾ ಎನ್ನುವ ವಿದ್ಯಾರ್ಥಿನಿ 625ಕ್ಕೆ 620(ಶೇ.99.20) ಅಂಕಗಳೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ ಪಡೆಯುವ ಜೊತೆಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ ಎಂದು ಶಾಲೆಯ ಮುಖ್ಯಸ್ಥರಾದ ಪಿ.ನಾಗೇಶ್ವರರಾವು ಹಾಗೂ ಪ್ರಾಚಾರ್ಯ ಸಾಯಿಕಿಶೋರ್ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ 81 ವಿದ್ಯಾರ್ಥಿಗಳ ಪೈಕಿ 80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 46 ಡಿಸ್ಟಿಂಕ್ಷನ್, 24 ಪ್ರಥಮ ಶ್ರೇಣಿ, 5 ದ್ವಿತೀಯ, 5 ತೃತೀಯ ಹಾಗೂ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಎಂ.ಜುಹಾ ಫಾತಿಮಾ 620, ನಿವೇದಿತಾ ದೇಶಪಾಂಡೆ 612, ಎಚ್.ಕಾರ್ತಿಕ 611, ಕೆ.ಮೋಹಿತ್ ಚೌದರಿ 608, ಮಹ್ಮದ್ ರಿಹಾನ್ 608, ವಿವೇಕ್ ಅಂಜನಾ 608, ಜಿ.ಎಸ್.ಮಹಾದೇವಗೌಡ 605, ಶಿಫಾ ಅಲಿ ಸಾಧಿಕ್ 601, ಸಿ.ಡಿಮೀನಾಕ್ಷಿ 599, ಜಿ.ವರ್ಷಿತಾ 599, ಬಿ.ನಿಧಿ 595, ಎಂ.ಗಣೇಶ್ 594, ಅಂಕಗಳನ್ನು ಪಡೆದಿದ್ದಾರೆ. ಮತ್ತು ಶಾಲೆ 19 ವಿದ್ಯಾರ್ಥಿಗಳು ಕನ್ನಡದಲ್ಲಿ ನೂರಕ್ಕೆ ನೂರು, ಹಿಂದಿಯಲ್ಲಿ 14 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಮತ್ತು ಸಮಾಜ ವಿಜ್ಞಾನದಲ್ಲಿ ಒಬ್ಬ ವಿದ್ಯಾರ್ಥಿ 100 ಕ್ಕೆ100 ಅಂಕಗಳನ್ನು ಪಡೆದಿದ್ದಾರೆಂದು ತಿಳಿಸಿದರು.
ಉತ್ತಮ ಅಂಕಗಳನ್ನು ಪಡೆದು ಶಾಲೆಯ, ಪಟ್ಟಣದ, ತಾಲ್ಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠೆಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಹಾಗೂ ಉತ್ತಮ ಫಲಿತಾಂಶಕ್ಕೆ ಕಾರಣರಾದ ಶಿಕ್ಷಕರನ್ನು ಶಾಲೆಯ ಮುಖ್ಯಸ್ಥರಾದ ಪಿ.ನಾಗೇಶ್ವರರಾವು, ಪ್ರಾಚಾರ್ಯ ಸಾಯಿಕಿಶೋರ್ ಮತ್ತು ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!