ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸ್‌ಸ್ಟ್ಯಾಂಡ್ ಹೃದಯ ಭಾಗದ ರಸ್ತೆ ದುರಸ್ಥಿಗೆ ಕರುನಾಡ ವಿಜಯ ಸೇನೆಯ ಹೋರಾಟ ಫಲ : ತಾತ್ಕಾಲಿಕ ಜಯ

ಹೊನ್ನಾವರ ಪಟ್ಟಣದ ಬಸ್‌ಸ್ಟ್ಯಾಂಡ್ ಹೃದಯ ಭಾಗದಲ್ಲಿರುವ ಕಿಂತಲಕೇರಿ ಮಾರ್ಗವಾಗಿ ಸಾಗುವ ತಿರುವಿನ ರಸ್ತೆ ಅನೇಕ ವರ್ಷಗಳಿಂದ ಅಪಘಾತಗಳಿಗೆ ಕಾರಣವಾಗಿತ್ತು. ಸಾರ್ವಜನಿಕರ ಸುರಕ್ಷತೆ ಗಂಭೀರ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ, ಕರುನಾಡ ವಿಜಯ ಸೇನೆ ಕಳೆದ ನಾಲ್ಕು ವರ್ಷಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ರಸ್ತೆ ದುರಸ್ಥಿಗಾಗಿ ಹೋರಾಟ ಆರಂಭಿಸಿತ್ತು.

ಸಂಘಟನೆಯ ನಿರಂತರ ಒತ್ತಾಯ ಮತ್ತು ಹೋರಾಟದ ಫಲವಾಗಿ, 2026ರಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡಿದ್ದು, ರಸ್ತೆ ದುರಸ್ತಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ರಸ್ತೆ ತಿರುವಿನ ಅಪಘಾತ ವಲಯದಲ್ಲಿ ಹಂಪ್ ಹಾಕಲಾಗಿದ್ದು ಇದನ್ನು ಹೋರಾಟದ ತಾತ್ಕಾಲಿಕ ಜಯವೆಂದು ಪರಿಗಣಿಸಲಾಗಿದೆ.

ಆದರೆ, ಶಾಶ್ವತ ಪರಿಹಾರಕ್ಕಾಗಿ ಇನ್ನೂ ಹೆಚ್ಚಿನ ಕ್ರಮ ಅಗತ್ಯವಿದೆ ಎಂದು ಸಂಘಟನೆ ತಿಳಿಸಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂಬುದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!