ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈನ್ ಬೋ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ರೈನೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 40 ವಿದ್ಯಾರ್ಥಿಗಳೂ ಉತ್ತೀರ್ಣರಾಗಿರುವುದು ವಿಶೇಷವಾಗಿದ್ದು, ಶಾಲೆಯು ಉತ್ತಮ ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರ ಸಮರ್ಪಿತ ಬೋಧನೆ, ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಮತ್ತು ಪೋಷಕರ ಸಹಕಾರ ಪ್ರಮುಖ ಕಾರಣಗಳಾಗಿವೆ. ನಿಯಮಿತ ಅಭ್ಯಾಸ, ಸಮಯ ಪಾಲನೆ ಹಾಗೂ ಪಾಠಗಳ ಮರು ಅಧ್ಯಯನದಿಂದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ. ಎಸ್. ಚಾಂದಭಾಷಾ ತಿಳಿಸಿದರು. ವೈಯಕ್ತಿಕ ಸಾಧನೆಯಲ್ಲಿ ಟಿ. ಶೇಷಾದ್ರಿವಾಸ 558 ಅಂಕ, ಎಸ್. ಸುದೀಪ್ ಕುಮಾರ್‌ ಅವರು 551 ಅಂಕಗಳನ್ನು ಪಡೆದು ಶಾಲೆಯ ಅಗ್ರಸ್ಥಾನ ಗಳಿಸಿದ್ದಾರೆ. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಶಾಲೆಗೆ ಹೆಮ್ಮೆ ತಂದಿದೆ. ಒಟ್ಟು 40 ವಿದ್ಯಾರ್ಥಿಗಳಲ್ಲಿ 2 ಡಿಸ್ಟಿಂಕ್ಷನ್, 22 ಮಂದಿ ಪ್ರಥಮ ಶ್ರೇಣಿ, 9 ದ್ವಿತೀಯ ಶ್ರೇಣಿ, 7 ಜನ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದವು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶಗಳನ್ನು ಸಾಧಿಸುವತ್ತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದಾಗಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!