ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆಬ್ಬಾಳ 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 619 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಸಣ್ಣ ವಚ್ಚಾ ಗ್ರಾಮದಲ್ಲಿ ಬೆಳೆದು 9ನೇ ತರಗತಿಯಲ್ಲಿರುವಾಗ ತಂದೆಯನ್ನು ಕಳೆದುಕೊಂಡ ಶ್ವೇತಾ ತಂದೆಯ ಆಸೆಯಂತೆ ಡಾಕ್ಟರ್ ಆಗಲು ಬಯಸಿದ್ದಾಳೆ. ಸರ್ಕಾರಿ ಶಾಲೆಯಲ್ಲಿ ಓದಿ ಬಡತನದಲ್ಲಿ ಬೆಳೆದು 619 ಅಂಕಗಳು ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಅಕ್ಷತಾ (612) ಶ್ರೀ ಲಕ್ಷ್ಮಿ(608), ಸ್ವಪ್ನ (605), ಸ್ಫೂರ್ತಿ (604), ವೈಷ್ಣವಿ (602) ಸೌಮ್ಯ (601), 7 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಯ ಹೆಸರು ರಾಜ್ಯದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ. ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಾಧನೆಗೆ ಹಿಂದುಳಿದ ವರ್ಗಗಳ ಇಲಾಖೆ ಕಲಬುರ್ಗಿ ಉಪನಿರ್ದೇಶಕರಾದ ಈರಪ್ಪ ಆಶಾಪುರ್ ಮತ್ತು ಶಾಲೆಯ ಪ್ರಾಂಶುಪಾಲರಾದ ಈರಣ್ಣ ಅರಕೆರೆ ಹಾಗೂ ಎಲ್ಲಾ ಶಿಕ್ಷಕ ಸಿಬ್ಬಂದಿವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ ಚಂದ್ರಶೇಖರ್ ಆರ್. ಪಾಟೀಲ್




















