ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೀಸಲಿಟ್ಟ 3.12 ಎಕರೆ ಜಾಗದಲ್ಲಿ ಸರ್ಕಾರದಿಂದ 25 ಕೋಟಿ ಅನುದಾನ ತಂದು ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸುವ ಭರವಸೆ ನೀಡಿದ ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ : ಈಗಾಗಲೇ ಸುಸಜ್ಜಿತ ನ್ಯಾಯಾಲಯ ನಿರ್ಮಾಣಕ್ಕಾಗಿ 3.13 ಎಕರೆ ಜಾಗ ಮೀಸಲಿಟ್ಟಿದ್ದು, ಸರ್ಕಾರದ ಮಟ್ಟದಲ್ಲಿ ಸುಮಾರು 25 ಕೋಟಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈಗ ಆರಂಭಗೊಂಡಿರುವ ನ್ಯಾಯಾಲಯದಲ್ಲಿ ಒಂದೊಂದಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ 20ನೇ ವಾರ್ಡಿನ ಶಿಬಿರದಿನ್ನಿ (ಮಾರುತಿನಗರ)ಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಸಿವಿಎಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನಾ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂಪ್ಲಿಯಲ್ಲಿ ನ್ಯಾಯಾಲಯ ಸ್ಥಾಪಿಸುವ ಕನಸಾಗಿತ್ತು. ಆದರೆ, ಈಗ ಆ ಕನಸು ನನಸಾಗಿದೆ. ಇಲ್ಲಿನ ನ್ಯಾಯಾಲಯದಿಂದ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಕೀಲರಾದ ಪ್ರಭಾಕರ, ಹರೀಶ್, ರುದ್ರಪ್ಪ, ಶಿವಪ್ಪ, ಯಂಕಪ್ಪ, ನಟರಾಜ, ಹುಲುಗಪ್ಪ, ವೀರಣ್ಣ, ಮಾರುತಿಸಿಂಗ್, ಮೋಹನ್ ಕುಮಾರ್ ದಾನಪ್ಪ, ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ಮುಂಖಡರಾದ ಕೆ.ಎಂ.ಹೇಮಯ್ಯಸ್ವಾಮಿ, ಹೊಸಕೋಟೆ ಜಗದೀಶ, ಜಿ.ರಾಮಣ್ಣ, ಬಿ.ಸಿದ್ದಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!