ಮಡಿಕೇರಿ: ಬಿಜೆಪಿ ಕಛೇರಿಯಲ್ಲಿ ಕೊಡಗು_ ಮೈಸೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಹಿಳಾಜನ ಆಕ್ರೋಶದ ಕುರಿತು ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಮಹಿಳಾಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಸೇರಿದಂತೆ ಇಂಡಿ ಮೈತ್ರಿಕೂಟ ಅಡ್ದಿಪಡಿಸಿರುವುದನ್ನು ಖಂಡಿಸಿದರು.
ಮಹಿಳೆಯರು ದೇಶದ ಅಭಿವೃದ್ಧಿಯಲ್ಲಿ ಸಮಾನಹಕ್ಕು ಮತ್ತು ಅವಕಾಶ ಪಡೆಯಬೇಕು ಎಂಬುದು ಎಲ್ಲರ ದೃಢ ನಂಬಿಕೆಯಾಗಿತ್ತು .ಇದಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟ ಮಹಿಳೆಯರ ಆಶಯಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿವೆ. ಮುಂಬರುವ ದಿನಗಳಲ್ಲಿ ದೇಶದ ಮಹಿಳೆಯರು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆಂದು ಮಹಿಳಾ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಪ್ರಿತುನ್ ಪೂವಣ್ಣ



















