ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣದಲ್ಲಿ ಗೋ ಸಮ್ಮಾನ್ ಅಭಿಯಾನ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂಬ ಹಕ್ಕೋತ್ತಾಯದ ಅಭಿಯಾನದ ಅಂಗವಾಗಿ ಗೋರಕ್ಷಣೆ ಪಡೆಯಿಂದ ಪಟ್ಟಣದಲ್ಲಿ ಸೋಮವಾರ ಗೋ ಸಮ್ಮಾನ್ ಮೆರವಣಿಗೆ ಜರುಗಿತು.
ಇಲ್ಲಿನ ಉದ್ಭವ ಗಣೇಶ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಗೋ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆ ವಾಕ್ಯಗಳೊಂದಿಗೆ ನಡುವಲ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ, ಅಂಬೇಡ್ಕರ್ ವೃತ್ತ, ಮಹಾತ್ಮಗಾಂಧಿ ವೃತ್ತ, ಕೊಟ್ಟಾಲ್ ರಸ್ತೆ ಮೂಲಕ ತಹಶೀಲ್ದಾರ್ ಕಛೇರಿವರೆಗೆ ತೆರಳಿ, ನಂತರ ತಹಶೀಲ್ದಾರ್ ಜೂಗಲ್ ಮಂಜುನಾಯಕಗೆ ಮನವಿ ಪತ್ರ ಸಲ್ಲಿಸಿದರು. ನಂತರ ಗೋ ರಕ್ಷಣಾ ಪಡೆಯು ಯುವ ಮುಖಂಡ ಗೋರ್ತಿ ಶ್ರೀನಿವಾಸ ಮಾತನಾಡಿ, ಗೋವಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನ ನೀಡಿದ್ದು, ಗೋ ಸಂರಕ್ಷಣೆ ಎಂಬುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಗೋವು ಮತ್ತು ನಾವು ಎಂಬುದರ ನಡುವೆ ಭಾವದ ಕೊಂಡಿ ಇದೆ. ಗೋ ಸಂರಕ್ಷಣೆಯನ್ನು ಮಾಡುವವರಿಗೆ ರಕ್ಷಣೆ ನೀಡುವ ಕಾರ್ಯವಾಗಬೇಕು. ರಕ್ಷಿಸಿದ ಗೋವಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣಪ್ರಸಾದ್, ಏನ್.ಎಮ್.ಪತ್ರಯ್ಯ ಸ್ವಾಮಿ, ಎಣ್ಣೆ ವೆಂಕಟೇಶ್, ಕಲ್ಯಾಣ ಚೌಕಿ ಮಠದ ಬಸವರಾಜ ಶಾಸ್ತ್ರಿ, ಎಸ್.ಎಂ.ಗುರುಪ್ರಸನ್ನ, ಗೋವಿಂದರಾಜು, ಡಾ.ರಾಮು, ಡಿ.ವಿ.ಸತ್ಯನಾರಾಯಣ, ಸಂತೋಷ್‌ಕುಮಾರ್, ಡಿ.ಸೋಮನಗೌಡ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!