ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಗ್ಗಾವ್ : 250 ಹಾಸಿಗೆ ಆಸ್ಪತ್ರೆ ಉದ್ಘಾಟನೆ

ಹಾವೇರಿ : ಶಿಗ್ಗಾವ್ ಪಟ್ಟಣದಲ್ಲಿ ಸೋಮವಾರ 96.50 ಕೋಟಿ ವೆಚ್ಚದಲ್ಲಿ 250 ಹಾಸಿಗೆಗಳ ಅತ್ಯಾಧುನಿಕ ನೂತನ ತಾಲೂಕು ಆಸ್ಪತ್ರೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೇಂದ್ರ ಗ್ರಾಹಕರ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣಾ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಉದ್ಘಾಟನೆ ಮಾಡಿದರು.
ಇಲ್ಲಿಯ ಸುತ್ತಮುತ್ತಲಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದಾಗಿ ಈ ನೂತನ ಆಸ್ಪತ್ರೆಯ ಸುಮಾರು 10.946 ಚದರ ಮೀಟರ್ ವಿಸ್ತೀರ್ಣದ ಈ ಆಸ್ಪತ್ರೆಯಲ್ಲಿ ಐ.ಸಿ.ಯು ಗಳು, ಆಪರೇಷನ್ ಥಿಯೇಟರ್ ಗಳು ಸೇರಿದಂತೆ ಡಯಾಲಿಸಿಸ್ ಘಟಕ, ರಕ್ತ ಬ್ಯಾಂಕ್, ವೈದ್ಯರು ಮತ್ತು ಸಿಬ್ಬಂದಿ ವಸತಿ ವ್ಯವಸ್ಥೆ ಸೇರಿದಂತೆ ಅನೇಕ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಶಿಗ್ಗಾವ್ ಸವಣೂರು ಕ್ಷೇತ್ರದ ಶಾಸಕರಾದ ಯಾಶೀರ್ ಅಹ್ಮದ್ ಖಾನ್ ಪಠಾಣ್, ಜಿಲ್ಲಾಧಿಕಾರಿ ಡಾ ವಿಜಯ ಮಾಂತೇಶ್ ದಾನಮ್ಮನವರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಗಳಾದ ರುಚಿ ಬಿಂದಲ್, ಜಿಲ್ಲಾ ವೈದ್ಯಾಧಿಕಾರಿಗಳು ತಾಲೂಕು ವೈದ್ಯಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು

ವರದಿ ಬಸವರಾಜ ಎಸ್.ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!