ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಜೆ.ಎನ್.ಗಣೇಶ ನೇತೃತ್ವದಲ್ಲಿ ಚಿನ್ನದ ಪದಕ ಪಡೆದ ಇಂದ್ರಜಾಗೆ ಗೌರವ ಸನ್ಮಾನ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವೀರಶೈವ ಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶಾಸಕ ಜೆ.ಎನ್.ಗಣೇಶ್ ನೇತೃತ್ವದಲ್ಲಿ ವಿನೂತನ ಮಹಿಳಾ ಮದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಇಂದ್ರಜಾ ಇವರಿಗೆ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಶಾಸಕ ಗಣೇಶ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಉತ್ತಮ ಪ್ರಜೆಗಳು ಎಂಬಂತೆ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಶಿಕ್ಷಣ ಸಂಸ್ಥೆಗಳಿಗೆ ಕೀರ್ತಿ ತರುವ ಜೊತೆಗೆ ಪೋಷಕರ ಆಸೆ, ಆಕಾಂಕ್ಷೆಗಳನ್ನು ಈಡೇರಿಸಬೇಕು. ಪೋಷಕರು ಮಕ್ಕಳಿಗೆ ಒಳ್ಳೆಯ ಭವಿಷ್ಯ ಒದಗಿಸಿಕೊಡಬೇಕೆಂಬ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅತಿ ಹೆಚ್ಚು ಒತ್ತು ನೀಡಿ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 850ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಎಂದರು. ನಂತರ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸುನೀತಾ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಧರ್ಮಪತ್ನಿ ಶ್ರೀದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಲಿಂಗಮೂರ್ತಿ, ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಇಸಿಒ ಟಿ.ಎಂ.ಬಸವರಾಜ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ದೊಡ್ಡಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಹನುಮಂತಪ್ಪ, ಶಿಕ್ಷಣ ಸಂಸ್ಥೆಗಳ ಪಿ.ನಾಗೇಶ್ವರರಾವ್, ಯು.ಶಿವರಾಜ, ಎನ್.ಲೋಕೇಶ, ಮುಖಂಡರಾದ ಕೆ.ಷಣ್ಮುಕಪ್ಪ, ಬಳ್ಳಾಪುರ ಲಿಂಗಪ್ಪ, ಬಿ.ಸಿದ್ದಪ್ಪ, ಸುಗ್ಗೇನಹಳ್ಳಿ ರಮೇಶ ಸೇರಿದಂತೆ ಶಾಲಾ-ಕಾಲೇಜು ಮುಖ್ಯಸ್ಥರು, ಮುಖ್ಯಗುರುಗಳು, ಪ್ರಾಚಾರ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!