ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿನಿ ಧನಶ್ರೀ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಶಾಸಕ ಲಕ್ಷ್ಮಣ ಸವದಿ.!

ಬೆಳಗಾವಿ:ಅಥಣಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಜೀವ ಕಳೆದುಕೊಂಡ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಧನಶ್ರೀ ರವೀಂದ್ರ ಗಸ್ತೆ ಅವರ ದುಃಖಕರ ಕಥೆ ಅಥಣಿಯ ಜನಮನಗಳನ್ನು ಕಲುಕಿದೆ. ತನ್ನ ಭವಿಷ್ಯದ ಕನಸುಗಳೊಂದಿಗೆ ಬದುಕು ಕಟ್ಟಿಕೊಳ್ಳಬೇಕಿದ್ದ ಆ ಬಾಲಕಿ ಅಕಾಲಿಕವಾಗಿ ಅಗಲಿರುವುದು ಎಲ್ಲರಲ್ಲೂ ನೋವು ಮೂಡಿಸಿದೆ.

ಈ ದುಃಖದ ನಡುವೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಮಂಜೂರಾದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ಶಾಸಕ ಲಕ್ಷ್ಮಣ ಸವದಿ ಅವರು ಮೃತ ವಿದ್ಯಾರ್ಥಿನಿಯ ಪಾಲಕರಿಗೆ ಹಸ್ತಾಂತರಿಸಿದರು.

ಪಟ್ಟಣದಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ ಚೆಕ್ ವಿತರಿಸಿದ ಅವರು, ಕುಟುಂಬದ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸವದಿ, “ಧನಶ್ರೀ ಹೀಗೊಂದು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿರುವುದು ಅತ್ಯಂತ ದುಃಖದ ಸಂಗತಿ. ಮನೆಯ ಆಧಾರವಾಗಬೇಕಿದ್ದ ಮಗು ಇಷ್ಟು ಬೇಗ ಅಗಲಿರುವುದು ಪಾಲಕರಿಗೆ ತುಂಬಲಾರದ ನೋವು. ಈ ಪರಿಹಾರ ಮೊತ್ತವು ಅವರ ನೋವನ್ನು ಕಡಿಮೆ ಮಾಡಲಾರದು, ಆದರೆ ಸ್ವಲ್ಪ ಮಟ್ಟಿನ ಆಸರೆಯಾಗಲಿ ಎಂಬುದು ಸರ್ಕಾರದ ಉದ್ದೇಶ. ದೇವರು ಆಕೆಯ ಆತ್ಮಕ್ಕೆ ಶಾಂತಿ ನೀಡಿ, ಪಾಲಕರಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ,” ಎಂದು ಕಳಕಳಿಯಿಂದ ಹೇಳಿದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!