ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು ಬೆಳಗಾವಿ ಹಾಗೂ ಮಾನ್ಯ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಬೆಳಗಾವಿ ಅವರ ನಿರ್ದೇಶನದ ಮೇರೆಗೆ ಸಾರ್ವಜನಿಕರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಬೈಲಹೊಂಗಲ ನಗರಸಭೆಯ ವತಿಯಿಂದ ನಗರದ ಕಿತ್ತೂರು ರಾಣಿ ಚನ್ನಮ್ಮಾಜಿ ವೃತ್ತದ ಬಳಿ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಘಟಕವನ್ನು ಆರಂಭಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತರು, ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಈ ಅರವಟಿಗೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ನಗರದ ಮುಖ್ಯ ರಸ್ತೆ ಹಾಗೂ ಮಾರುಕಟ್ಟೆಗೆ ಆಗಮಿಸುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಜೊತೆಗೆ, ಬಿಸಿಲಿನ ತಾಪ ಹೆಚ್ಚಿರುವುದರಿಂದ ನಿಯಮಿತವಾಗಿ ನೀರು ಸೇವಿಸುವುದು ಮತ್ತು ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಕಿರಿಯ ಅಭಿಯಂತರ ಶ್ರೀ ಬಸನಗೌಡ ಪಾಟೀಲ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀ ಎಂ.ಎಂ. ಧಾರವಾಡಕರ, ಕಿರಿಯ ಆರೋಗ್ಯ ನಿರೀಕ್ಷಕರು ಶ್ರೀ ಎ.ವೈ. ಹೆಗಡೆ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ ಮಂಜು ಎಂ.ಚಿಕ್ಕಣ್ಣವರ



















