ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ” ಬದಲಾಗು ನೀ ಬೆಳಕಾಗು ನೀ ” ಪುಸ್ತಕ ಬಿಡುಗಡೆ.

ಕೊಪ್ಪಳದ ಶ್ರೀ ಗವಿಮಠದಲ್ಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ನಾಲ್ಕನೇ ಕೃತಿ ಬದಲಾಗು ನೀ ಬೆಳಕಾಗು ನೀ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಪರಮ ಪೂಜ್ಯರು ಇನ್ನೂ ಹೆಚ್ಚಿನ ಕೃತಿಗಳು ನಿಮ್ಮಿಂದ ನಾಡಿಗೆ ಪರಿಚಯವಾಗಲಿ ಶುಭವಾಗಲಿ ಎಂದು ಆಶೀರ್ವಾದ ನೀಡಿದರು.
ವೃತ್ತಿಯಲ್ಲಿ ಶಿಕ್ಷಕರಾಗಿರುವ ಶ್ರೀ ಮುತ್ತು ಯ. ವಡ್ಡರ ಅವರು ಮೊದಲ ಬಾರಿಗೆ ವಿದ್ಯಾರ್ಥಿಗಳಿಗಾಗಿ ಸರಳ ಗಣಿತ ಪುಸ್ತಕ, ಎರಡನೇ ಬಾರಿಗೆ ನಾಡಿನ ಉದ್ದಗಲಕ್ಕೂ ಇರುವ ಎಲೆಮರೆ ಕಾಯಿಯ ಹಾಗೇ ಇರುವ ಸಾಧಕರನ್ನು ಗುರುತಿಸಿ ಎಲೆಮರೆ ಕಾಯಿಗಳು ಎಂಬ ಪುಸ್ತಕ ಹೊರತಂದು ಜೊತೆಗೆ ಇದೇ ವರ್ಷದ ಜನವರಿ ತಿಂಗಳಲ್ಲಿ ಸ್ಪೂರ್ತಿದಾಯಕ ಕವನಗಳ ಸನ್ಮಾರ್ಗದ ದುಂಬಿ ಎಂಬ ಮೂರನೇ ಕೃತಿ ಬಿಡುಗಡೆ ಮಾಡಿ ನಾಡಿನ ಎಲ್ಲ ಓದುಗರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಇದೀಗ ಎಲ್ಲ ರೀತಿಯಿಂದಲೂ ಸ್ಪೂರ್ತಿದಾಯಕವಾಗಿರುವ ಬದಲಾಗು ನೀ ಬೆಳಕಾಗು ನೀ ಈ ಪುಸ್ತಕವು ಮುಖ್ಯವಾಗಿ ವಿದ್ಯಾರ್ಥಿಗಳಿಗಾಗಿ, ಶಿಕ್ಷಕರಿಗಾಗಿ, ನಿರೂಪಕರಿಗಾಗಿ ಹಾಗೂ ಭಾಷಣಕಾರರಗಾಗಿ ಹೇಳಿ ಮಾಡಿಸಿರುವ ಪುಸ್ತಕ ಇದಾಗಿದೆ. ವಿದ್ಯಾರ್ಥಿಗಳು ಹೇಗೆ ಓದಬೇಕು ಜೀವನದಲ್ಲಿ ಅನೇಕ ಅವಮಾನ ಅಪಮಾನಗಳನ್ನು ಎದುರಿಸಿ ಹೇಗೆ ಮುಂದೆ ಬರಬೇಕು, ವಿದ್ಯಾರ್ಥಿಗಳು ಒಳ್ಳೆಯ ಹುದ್ದೆ ಸೇರಿ ಆ ಶಾಲೆಯ ಕೀರ್ತಿ ಹೇಗೆ ತರಬೇಕು, ಅದೇ ರೀತಿ ತಂದೆ ತಾಯಿಗಳ ಬಗ್ಗೆ ಗುರುಗಳ ಬಗ್ಗೆ ಮತ್ತು ಮಕ್ಕಳಲ್ಲಿ ಸಾಧಿಸುವ ಛಲ ಹುಟ್ಟಿಸುವಂತಹ ಪ್ರೇರಣಾದಾಯಕ ಸ್ಪೂರ್ತಿದಾಯಕ ಲೇಖನಗಳನ್ನು ಈ ಪುಸ್ತಕ ಒಳಗೊಂಡಿದೆ.

ಈ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಶಿಕ್ಷಕ ಶ್ರೀ ಮುತ್ತು ಯ. ವಡ್ಡರ ಅವರು ಪರಮಪೂಜ್ಯರನ್ನು ಭಕ್ತಿಭಾವದಿಂದ ಗೌರವಿಸಿ ಸನ್ಮಾನಿಸಿ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳ ಕುರಿತು ಬರೆದಿರುವಂತಹ ಕವನದ ಸ್ಮರಣಿಕೆಯನ್ನು ಪೂಜ್ಯರಿಗೆ ಅರ್ಪಿಸಿದರು. ಮಠದ ಆಡಳಿತ ಮಂಡಳಿ, ಸ್ವಾಮೀಜಿಗಳು, ಅಧಿಕಾರಿಗಳು ಹಾಗೂ ಮಠದ ಸರ್ವ ಸಿಬ್ಬಂದಿಯವರು, ಕವಿ ಮನಸ್ಸುಗಳು,ಶಿಕ್ಷಕಿಯರಾದ ಶ್ರೀಮತಿ ಮಲ್ಲಮ್ಮ ತಿರುಪತಿ ವಡ್ಡರ ಹಾಗೂ ಶ್ರೀ ಪ್ರವೀಣ್ ವಾಲಿಕಾರ ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರು, ಶ್ರೀಮತಿ ಗಂಗಾ ಎಮ್ ವಡ್ಡರ, ಯುವ ಸಾಹಿತಿ ಜ್ಯೋತಿ ಆನಂದ ಚಂದುಕರ, ತಿರುಪತಿ, ಪ್ರತೀಕ್ ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡಿದರು. ಅನ್ನ ಅಕ್ಷರದ ಆಶ್ರಯ ನೀಡುತ್ತಿರುವ ಪುಣ್ಯ ಸ್ಥಳದಲ್ಲಿಯೇ ಪುಸ್ತಕವನ್ನು ಪರಮ ಪೂಜ್ಯರಿಂದ ಲೋಕಾರ್ಪಣೆಗೊಳಿಸಿ ಶ್ರೀ ಮುತ್ತು ವಡ್ಡರ ಹಾಗೂ ಅವರ ಆತ್ಮೀಯ ಸ್ನೇಹಜೀವಿಗಳು, ಕುಟುಂಬದ ಸದಸ್ಯರು ಹರ್ಷ ವ್ಯಕ್ತಪಡಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!