ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೂ ಲಭಿಸಲಿಲ್ಲ. ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಿಪ್ರಾಯ

ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೂ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಂಪಿಯನ್ ಗಳನ್ನು ದೇಶಕ್ಕೆ ಕೊಡಗೆಯಾಗಿ ನೀಡಿದೆ.ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂ. ಗಳನ್ನು ಒದಗಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಕ್ರೀಡಾ ಸಚಿವರರಾದ ಡಾ ಮನ್ಸುಖ್ ಮಾಂಡವೀಯ ರವರಿಗೆ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯನವರು ಲಿಖಿತ ಮನವಿಯನ್ನು ನೀಡಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!