
ಕೊಪ್ಪಳ : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಅರ್ಥಶಾಸ್ತ್ರ ವಿಭಾಗ ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತೀಯ ಅರ್ಥಶಾಸ್ತ್ರಜ್ಞ ಚಾಣಕ್ಯ ಮತ್ತು ಆಧುನಿಕ ಅರ್ಥಶಾಸ್ತ್ರದ ಪಿತಾಮಹ ಆಡಂಸ್ಮಿತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ವಿಶೇಷ ಉಪನ್ಯಾಸದ ಸಂಪನ್ಮೂಲ ವ್ಯಕ್ತಿಯಾಗಿ ಡಾಕ್ಟರ್ ಬಸಮ್ಮ ಪಾಟೀಲ್, ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ರವರು ಮಹಿಳಾ ಸಬಲೀಕರಣದಲ್ಲಿ ಸರ್ಕಾರದ ಯೋಜನೆಗಳ ಪಾತ್ರ ಕುರಿತು ವಿವರಣೆಯನ್ನು ನೀಡಿದರು. ಮಹಿಳೆ ಶಿಕ್ಷಣವನ್ನು ಪಡೆದು ಸರ್ಕಾರಿ ಅಥವಾ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ಕುಟುಂಬ ಮತ್ತು ಸಮಾಜದಲ್ಲಿ ಅಪಾರ ಗೌರವ ಮತ್ತು ಮನ್ನಣೆ ಗಳಿಸಲು ಸಾಧ್ಯ ಎಂದು ಎಂದು ಹೇಳುತ್ತಾ ವಿದ್ಯಾರ್ಥಿನಿಯರು ಸರ್ಕಾರಿ ಯೋಜನೆಗಳನ್ನು ಬಳಸಿಕೊಂಡು ತಮ್ಮ ಕಾಲ ಮೇಲೆ ತಾವು ನಿಲ್ಲಬೇಕೆಂದು ಕಿವಿ ಮಾತು ಹೇಳಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶುಭ ಟಿ ಇ ಪ್ರಾಸ್ತಾವಿಕ ಭಾಷಣ ಮಾಡ್ತಾ ಸ್ವ- ಉದ್ಯೋಗಗಳಿಂದ ಮಹಿಳಾ ಸಬಲೀಕರಣ ಸುಗಮವಾಗುತ್ತದೆ ಎಂದು ಹೇಳುತ್ತಾ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಕೋರಿದರು. ಅಧ್ಯಕ್ಷತೆ ವಹಿಸಿದ ಡಾ. ಹುಲಿಗಮ್ಮ ಬಿ ರವರು ವಿದ್ಯಾರ್ಥಿನಿಯರು ತಮ್ಮ ಶಿಕ್ಷಣದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡು ನಂತರ ಉದ್ಯೋಗವನ್ನು ಗಿಟ್ಟಸಿಕೊಳ್ಳಬೇಕು ಎಂದು ಹೇಳುತ್ತಾ ಅರ್ಥಶಾಸ್ತ್ರದ ಅರ್ಥ ಎನ್ನುವ ಪದ ಜೀವನದ ಅರ್ಥವನ್ನು ಮತ್ತು ಜೀವನಕ್ಕೆ ಬೇಕಾದ ಹಣವನ್ನು ಪ್ರತಿನಿಧಿಸುತ್ತದೆ. ಹಣ ಗಳಿಸುವ ಸಾಮರ್ಥ್ಯದ ಜೊತೆ ಜೀವನವನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗ ಆಯೋಜಿಸಿದ್ದ ಈಗ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಮಯ್ಯ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ನರಸಿಂಹ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸುಮಿತ್ರ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ರುದ್ರಮ್ಮ ಹಟ್ಟಿಹೊಳ್ಳೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಯೀದ ನಿರೂಪಿಸಿದರು. ವಿದ್ಯಾರ್ಥಿನಿ ದೇವಮ್ಮ ಸ್ವಾಗತಿಸಿದರು ವಿದ್ಯಾರ್ಥಿ ನಿಂಗಮ್ಮ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿನಿಯರಾದ ಮಧು ಮತ್ತು ರೆಹಮಾನಬಿ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
- ಕರುನಾಡ ಕಂದ ಪತ್ರಿಕೆ




















