ಸಿರುಗುಪ್ಪ – ತಾಲೂಕು ತೆಕ್ಕಲಕೋಟೆ ಪಟ್ಟಣ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು ಈ ಸಾಮೂಹಿಕ ಶುಭ ವಿವಾಹದ ಕಾರ್ಯಕ್ರಮದಲ್ಲಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಅಯ್ಯಪ್ಪ ಸ್ವಾಮಿ ದೇವರ ದರ್ಶನ ಪಡೆದು ಸಾಮೂಹಿಕ ಶುಭ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ವಧು ವರರಿಗೆ ಭಗವಂತನ ಪರಮ ಕೃಪೆ ಇರಲಿ ಎಂದು ಅವರು ಆಶೀರ್ವದಿಸಿ ಶುಭ ಹಾರೈಸಿದರು. ಮುಖ್ಯ ಅರ್ಚಕರಾದ ಮುರಳಿ ಗುರುಸ್ವಾಮಿ ಮುಖಂಡರಾದ ಬಿ ವೆಂಕಟೇಶ್ ಎಚ್ ಗಣೇಶ್ ಅಬ್ದುಲ್ ನಬಿ ಸೇರಿದಂತೆ ಮತ್ತಿತರ ಗಣ್ಯರು ಇದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















