ಹುನಗುಂದ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ರಾಜ್ಯಕ್ಕೆ ಟಾಪರ್ ಆದ ಹುನಗುಂದ ಪಟ್ಟಣದ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಬಸವರಾಜ ಕಂದಕೂರ ಅವರನ್ನು ಪಟ್ಟಣದ ಎಸ್.ಎಸ್.ಕಡಪಟ್ಟಿ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಂಸ್ಥೆಯ ಮ್ಯಾನೇಜಿಂಗ ಟ್ರಸ್ಟಿ ಬಸವರಾಜ ಎಸ್.ಕಡಪಟ್ಟಿ ಮಾತನಾಡಿ ಸೌಜನ್ಯ ಬಸವರಾಜ ಕಂದಕೂರ ಅವರು ಪೂರ್ವ ಪ್ರಾಥಮಿಕದಿಂದ ೫ ನೇ ತರಗತಿವರೆಗೆ ನಮ್ಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ೧೦ನೇ ತರಗತಿಯಲ್ಲಿ ೬೨೫ ಕ್ಕೆ ೬೨೫ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಶ್ರದ್ಧೆ, ಪರಿಶ್ರಮ, ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಯಶಸ್ಸು ಸಾದ್ಯವಾಗಿದೆ. ಇದು ನಮ್ಮ ಶಾಲೆಗೆ ಮತ್ತು ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸುವುದರ ಜೊತೆಗೆ ವಿದ್ಯಾರ್ಥಿನಿಯ ಈ ಸಾಧನೆಯು ಮುಂದಿನ ದಿನಗಳಲ್ಲಿ ಶಾಲೆಯ ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿದೆ ಎಂದರು.
ಸನ್ಮಾನ ಸಮಾರಂಭದಲ್ಲಿ ಚೇರಮನರಾದ ಲತಾ ಬಸವರಾಜ ಕಡಪಟ್ಟಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು,ಪ್ರಾಚಾರ್ಯ,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು.ಸಾಧಕ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.
- ಕರುನಾಡ ಕಂದ




















