ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೈಸೂರು ರಾಜ್ಯ ಮೊದಲ ಮುಖ್ಯಮಂತ್ರಿ ಕೆ ಚಂಗಲ ರಾಯರೆಡ್ಡಿ 125ನೇ ಜನುಮದಿನ ಹಾಗೂ ಅಂತರರಾಷ್ಟ್ರೀಯ ಅಗ್ನಿಶಾಮಕರ ದಿನ

ಸಿರುಗುಪ್ಪ- ಯಾವಾಗ ಎಲ್ಲದಕ್ಕೂ ರೂಪಾಯಿಯಲ್ಲಿ ಬೆಲೆ ಕಟ್ಟಲು ಮುಂದಾಗುತ್ತೇವೆಯೋ ಆಗ ಜೀವನದ ವೈಭವ ಮರೆಯಾಗಲು ಶುರುವಾಗುತ್ತದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು ಹೇಳಿದರು. ಸಿರುಗುಪ್ಪ ನಗರದ ಇಬ್ರಾಹಿಂ ಮಂಜಿಲ್ ನಲ್ಲಿ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿ ಎನ್ನುವ ಖ್ಯಾತಿ ಪಡೆದ ಕೆ ಚಂಗಲ ರಾಯರೆಡ್ಡಿ (ಕೆ ಸಿ ರೆಡ್ಡಿ ) ಅವರ 125ನೇ ಜನುಮ ದಿನ ಹಾಗೂ ಅಂತರರಾಷ್ಟ್ರೀಯ ಅಗ್ನಿಶಾಮಕರ ದಿನವನ್ನು ನೆನಪಿಸಿ ಗೌರವಿಸಿ ಸ್ಮರಿಸಿ ಅವರು ಮಾತನಾಡುತ್ತಾ ಕೆ ಚಂಗಲ ರಾಯರೆಡ್ಡಿ ಅವರು 1902ರ ಮೇ 4 ರಂದು ಕೋಲಾರದ ಕ್ಯಾಸಂಬಳ್ಳಿಯಲ್ಲಿ ಜನಿಸಿದರು ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಅವರು ಸ್ವಾತಂತ್ರ್ಯದ ಬಳಿಕ 1947 – 1952 ಅವಧಿಯಲ್ಲಿ ಮೈಸೂರು ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿ 1976 ರಲ್ಲಿ ನಿಧನರಾದರು.
ಅಗ್ನಿಶಾಮಕ ಅಪಾಯಕಾರಿ ಸನ್ನಿವೇಶಗಳಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗುವವರು ಅಗ್ನಿಶಾಮಕ ದಳ ಸಿಬ್ಬಂದಿ ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 4ರಂದು ಅಂತರರಾಷ್ಟ್ರೀಯ ಅಗ್ನಿಶಾಮಕರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಜನಾಭಿಪ್ರಾಯ ಮುಖಂಡರು ಸಮಾಜ ಸುಧಾರಕ ಅಬ್ದುಲ್ ನಬಿಯವರು ವಿವರಿಸಿದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!