ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ಫಲಿತಾಂಶ

ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿಗೆ ಗೆಲವು

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ಮತ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ, ಅವರ ಪ್ರತಿ ಸ್ಪರ್ಧಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂಟಿಮಠ ಅವರಿಗಿಂತ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.
ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರು 98,919 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ 76587 ಮತಗಳನ್ನು ಪಡೆದು ಪರಾಜಯ ಹೊಂದಿರುತ್ತಾರೆ. ಅದೇ ರೀತಿ ಉತ್ತಮ ಪ್ರಜಾಕೀಯ ಪಾರ್ಟಿಯ ಅಂತೋಷ ಸವ್ವಾಸೆ 512 ಮತಗಳನ್ನು ಪಡೆದರೆ, ಬ್ಲೂ ಇಂಡಿಯಾ ಪಾರ್ಟಿಯ ತಳವಾರ ಶಿವಕುಮಾರ 112, ಜನತಾ ಚಳವಳಿ ಭಾರತ ಪಕ್ಷದ ತೋಜೋರಾಮಶೆಟ್ಟಿ ದೇವಾಂಗ 62, ಕರ್ನಾಟಕ ರಕ್ಷಾ ಸಮಿತಿಯ ನಾಗರಾಜ ಕಲಕುಟಗರ 154, ಆಲ್ ಇಂಡಿಯಾ ಜನರಕ್ಷಾ ಪಾರ್ಟಿಯ ಸಿದ್ದಪ್ಪ ಗೋಡಿ 131, ಪಕ್ಷೇತರ ಅಭ್ಯಥಿಗಳಾದ ಆನಂದ ಜಕಾತಿ 198, ರವಿ ಶಿವಪ್ಪ ಪಡಸಲಗಿ 389 ಮತಗಳನ್ನು ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಉಪ ಚುನಾವಣೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 26,0182 ಮತಗಳು ಇದ್ದು, ಈ ಪೈಕಿ 177073 ಮತಗಳು ಚಲಾವಣೆಗೊಂಡಿದ್ದು, ಅದರಲ್ಲಿ 1458 ಮತಗಳು ನೋಟಾ ಮತಗಳು ಇರುತ್ತವೆ. 100 ಮತಗಳು ತಿರಸ್ಕೃತ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಗೆಲವು ಸಾಧಿಸಿದ ಕಾಂಗ್ರೇಸ್ ಪಕ್ಷದ ಉಮೇಶ ಮೇಟಿ ಅವರಿಗೆ ಚುನಾವಣಾಧಿಕಾರಿ ಸಂತೋಷ ಜಗಲಾಸರ ಪ್ರಮಾಣ ಪತ್ರ ವಿತರಣೆ ಮಾಡಿದರು.
ಪ್ರಮಾಣ ಪತ್ರ ವಿತರಣೆಯಲ್ಲಿ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಉಪ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೇರಿದಂತೆ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!