ಬೈಲಹೊಂಗಲ ನಗರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಹಾಗೂ ಆಸ್ತಿ ಮಾಲೀಕರಿಗೆ ಈ ಮೂಲಕ ತಿಳಿಸುವುದೇನೆಂದರೆ, ಸನ್ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ನೀಡಲಾದ ಶೇ. 5% ರಷ್ಟು ರಿಯಾಯಿತಿ ಸೌಲಭ್ಯದ ಅವಧಿಯನ್ನು ಮಾನ್ಯ ಸರ್ಕಾರವು ದಿನಾಂಕ: 31-05-2026 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿರುತ್ತದೆ. ಕಾರಣ ನಗರದ ಸಾರ್ವಜನಿಕರು ಈ ವಿಸ್ತರಿಸಿದ ಕಾಲಾವಕಾಶವನ್ನು ಸದುಪಯೋಗಪಡಿಸಿಕೊಂಡು, ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಸಭೆಯ ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಆರ್. ಹುಗ್ಗಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




















