ಕೆಂಭಾವಿ: ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಇಂದು ಕೆಂಭಾವಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗುರುರಾಜ ಎಸ್. ಅಂಗಡಿ ಅವರ ಸುದೀರ್ಘ ಆಯಸ್ಸು ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಲಾಯಿತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯರಾದ ಡಾ. ಬನೆಪ್ಪ ಅವರು ಮಾತನಾಡಿ, “ಸಮಾಜ ಸೇವೆಯ ಮೂಲಕ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಗಳು ಇತರರಿಗೆ ಪ್ರೇರಣೆಯಾಗಲಿ,” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಅಧ್ಯಕ್ಷರಾದ ಶರಣು ದೇವರಮನಿ, ಪ್ರಮುಖರಾದ ಮುರ್ತುಜಾ ಸುರಪುರ, ಮಹಾಂತೇಶ ಸಿರಿ, ಕೃಷ್ಣ ವಸ್ಟರ್, ನಾರಾಯಣ ಸೂರ್ಯವಂಶಿ, ಶರಣು ಖಾನಾಪುರ, ಹಾಗೂ ಆನಂದ ಆಶಿಂಗಳ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- ಕರುನಾಡ ಕಂದ




















