ಸಿರುಗುಪ್ಪ – ನಗರದ ತಾಲೂಕು ಪಂಚಾಯತ್ ಕಚೇರಿಯ ಮೈದಾನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮ ಬಳ್ಳಾರಿ ಇವರಿಂದ 2023-24 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಆಯ್ಕೆಯಾದ ಫಲಾನುಭವಿಗಳಿಗೆ ಮೋಟಾರ್ ಪೈಪು, ಪಂಪು ಮತ್ತಿತರೆ ಸಾಮಗ್ರಿಗಳನ್ನು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲೂಕ ಅಭಿವೃದ್ಧಿ ಅಧಿಕಾರಿ ಕೆ.ಎಚ್.ಲಕ್ಷ್ಮಣ ಮುಖಂಡರಾದ ಹೆಚ್.ಗಣೇಶ್, ಬಿ.ಉಮೇಶ್ ಗೌಡ, ಕೋದಂಡರಾಮ ಮತ್ತಿತರ ಮುಖಂಡರು ಫಲಾನುಭವಿಗಳು ಇದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















