ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತ ನಾಯಕ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ.

ಬಿ.ಎಸ್. ಯಡಿಯೂರಪ್ಪ (ಬಿ.ಎಸ್.ವೈ) ಕರ್ನಾಟಕದ ಪ್ರಮುಖ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರಾಗಿದ್ದು, ನಾಲ್ಕು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅನುಭವಿ ರಾಜಕಾರಣಿ. ರೈತಪರ ನಾಯಕರೆಂದು ಜನಪ್ರಿಯರಾಗಿರುವ ಇವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಧೀಮಂತ ವ್ಯಕ್ತಿತ್ವದ ನಿಸ್ವಾರ್ಥ ಸೇವೆಯ ಜನನಾಯಕರು. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಜನಿಸಿದ ಯಡಿಯೂರಪ್ಪನವರು, ಸಾಮಾಜಿಕ ಸೇವೆಗಳ ಮೂಲಕ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಶಿಕಾರಿಪುರದಲ್ಲಿ ಜನಪ್ರಿಯತೆ ಗಳಿಸಿದ ಇವರು, ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 2026ರ ಮೇ ತಿಂಗಳ ವೇಳೆಗೆ ಅವರು ಸಕ್ರಿಯ ರಾಜಕೀಯದಿಂದ ದೊಡ್ಡ ಮಟ್ಟದಲ್ಲಿ ನಿವೃತ್ತಿ ಹೊಂದಿದ್ದರೂ, ಪಕ್ಷದ ಹಿರಿಯ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಂತೆಯೇ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರ ಹೆಸರು ಕೇಳಿದಾಗ ಮೊದಲು ನೆನಪಾಗುವುದು ಒಬ್ಬ ನಿಜ ಅರ್ಥದ ಕಾರ್ಯಕರ್ತರ ನಾಯಕ. ಸಾಮಾಜಿಕ ಕಾರ್ಯಕರ್ತನಾಗಿ ತನ್ನ ಸಂಸ್ಕಾರ ಮತ್ತು ಬಿಜೆಪಿ ತನಗೆ ಕೊಟ್ಟ ವೇದಿಕೆ ಈ ಎರಡನ್ನೂ ಸರಿಯಾದ ದಿಕ್ಕಿನಲ್ಲಿ ಸರಿಯಾದ ಪ್ರಮಾಣದಲ್ಲಿ ಬಳಸಿಕೊಂಡು, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ, ಅಧಿಕಾರಕ್ಕೆ ತಂದವರು. ಇಂದು ಅವರು ತಮ್ಮ ರಾಜಕೀಯ ಜೀವನದ ಸಾರ್ಥಕ 50 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿ. ಇದು ಕೇವಲ ಒಬ್ಬ ವ್ಯಕ್ತಿಯ ಯಶಸ್ಸಲ್ಲ, ಇದು ಬಿಎಸ್‌ವೈ ಎಂಬ ಒಬ್ಬ ದೈತ್ಯ ಯಶಸ್ವಿ ಕಾರ್ಯಕರ್ತನ ದೊಡ್ಡ ಯಶಸ್ಸು ಎಂದರು ಖಂಡಿತವಾಗಿಯೂ ತಪ್ಪಾಗಲಾರದು. ಅಂದಹಾಗೆ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರು. ಬೂಕನಕೆರೆಯ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ ಇವರು, ಶಿವಮೊಗ್ಗದ ಶಿಕಾರಿಪುರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿ, ದಕ್ಷಿಣ ಭಾರತದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ 4 ಬಾರಿ ರಾಜ್ಯವನ್ನು ಆಳಿದ ಕೀರ್ತಿ ಹೊಂದಿದ್ದಾರೆ. ರೈತ ಹೋರಾಟಗಾರರಾಗಿ, ಸಂಘಟಕರಾಗಿ ಐದು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದಾರೆ. 1970ರ ದಶಕದಲ್ಲಿ ಶಿಕಾರಿಪುರ ಪುರಸಭೆಯ ಸದಸ್ಯರಾಗಿ ಮತ್ತು ನಂತರ ಅಧ್ಯಕ್ಷರಾಗಿ ರಾಜಕೀಯ ಪ್ರವೇಶ. ಸಾಮಾಜಿಕ ಸೇವೆಗಳ ಮೂಲಕ ತಮ್ಮ ಬದ್ಧತೆ ತೋರಿದರು.1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 45 ದಿನಗಳ ಜೈಲುವಾಸ ಅನುಭವಿಸಿದ್ದರು.1983ರಲ್ಲಿ ಮೊದಲ ಬಾರಿಗೆ ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಅಂದಿನಿಂದ, ಅವರು ಶಿಕಾರಿಪುರದಲ್ಲಿ ಜನಪ್ರಿಯ “ಮಾಸ್ ಲೀಡರ್” ಆಗಿ ಬೆಳೆದರು. 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡು, ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಿ ಬಲಪಡಿಸಿದರು. ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ, ರೈತಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದು ಕರುನಾಡಿಗೆ ಮಾದರಿಯಾಗಿದ್ದಾರೆ.ಪ್ರಸ್ತುತ, ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಮತ್ತು ಸಕ್ರಿಯ ಮಾರ್ಗದರ್ಶಕರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ 5 ದಶಕಗಳ ಸುದೀರ್ಘ ರಾಜಕೀಯ ಹಾದಿಯು ಸಾಮಾನ್ಯ ಕಾರ್ಯಕರ್ತನೋರ್ವ ರಾಜ್ಯದ ಚುಕ್ಕಾಣಿ ಹಿಡಿದ ಸ್ಪೂರ್ತಿದಾಯಕ ಕಥೆಯಾಗಿ, ಸರ್ವರಿಗೂ ಪ್ರೇರಣದಾಯಕವಾಗಿದ್ದಾರೆ.

ಸ್ಪೂರ್ತಿಯ ಚಿಲುಮೆ ಬಿಎಸ್ ವೈ:
ಕರ್ನಾಟಕದ ರಾಜಕೀಯ ಇತಿಹಾಸವನ್ನು ಬಿ.ಎಸ್.ಯಡಿಯೂರಪ್ಪ (ಬಿಎಸ್‌ವೈ) ಅವರ ಉಲ್ಲೇಖವಿಲ್ಲದೆ ಬರೆಯಲು ಸಾಧ್ಯವಿಲ್ಲ. ಮಂಡ್ಯದ ಬೂಕನಕೆರೆಯ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ, ಶಿವಮೊಗ್ಗದ ಶಿಕಾರಿಪುರವನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು, ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರಕೋಟೆ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಮೇ ತಿಂಗಳಿಗೆ ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳು ಕಳೆಯುತ್ತಿವೆ. ಯಾವುದೇ ರಾಜಕೀಯದ ಹಿನ್ನೆಲೆಯಿಲ್ಲದೇ ಸಾಮಾನ್ಯ ಗುಮಾಸ್ತ ವೃತ್ತಿಯ ಓರ್ವ ವ್ಯಕ್ತಿ ರಾಜಕೀಯ ರಂಗದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸೇವೆ ಸಲ್ಲಿಸಿ, ಮಹತ್ತರ ಸ್ಥಾನಕ್ಕೇರುವ ಘಟ್ಟಗಳು ನಿಜಕ್ಕೂ ರೋಮಾಂಚನಕಾರಿಯಾಗಿವೆ.

ಯಡಿಯೂರಪ್ಪ ಅವರ ಅಭಿಮಾನೋತ್ಸವ :
ರೈತ ನಾಯಕರು, ಸಂಘಟಕರು, ಹೋರಾಟಗಾರರು, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಧೀಮಂತ ನಾಯಕರು ಯಡಿಯೂರಪ್ಪನವರು. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿದ ರೈತರ ಆಶಾಕಿರಣ, ಬಡ ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮೀ ಯೋಜನೆ, ರೈತರ ಸಾಲ ಮನ್ನಾ, ವಿದ್ಯಾರ್ಥಿನಿಯರಿಗಾಗಿ ಸೈಕಲ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಜನಮನ್ನಣೆ ಗಳಿಸಿದ್ದಾರೆ. ನಮ್ಮ ರಾಜ್ಯದ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಇವರ ಕೊಡುಗೆ ಅಪಾರ. ಅಭಿವೃದ್ಧಿ, ರೈತರ ಹಿತ ಹಾಗೂ ಪಕ್ಷದ ಬಲವರ್ಧನೆಗೆ ಸದಾ ಶ್ರಮಿಸಿದ ಯಡಿಯೂರಪ್ಪನವರ ನಾಯಕತ್ವಕ್ಕೆ ಗೌರವ ಸಲ್ಲಿಸುವ ಅವಕಾಶ ನಮಗೆ ದೊರೆತಿದೆ.
ಈ ನಿಟ್ಟಿನಲ್ಲಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಇದೇ ಮೇ 9, 2026ರಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ದೇಶದ ವಿವಿಧ ಭಾಗಗಳಿಂದ, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಠಾಧೀಶರು, ಅಭಿಮಾನಿಗಳು, ಹಿತೈಷಿಗಳು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಕಾರಣ
ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಗೌರವ ಸಲ್ಲಿಸಲು ಏರ್ಪಡಿಸಲಾಗಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಜಾತಿ-ಮತ-ಪಕ್ಷ ಭೇದಭಾವ ಮಾಡದೆ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪ್ರಾರ್ಥಿಸುತ್ತೇನೆ. BSY ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ, ಅದು ಅವರ ಪ್ರಾಮಾಣಿಕ ಜನಸೇವೆಗೆ ಸಲ್ಲುವ ಗೌರವ. ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲು ಸರ್ವರಿಗೂ ಆದರದ ಆತ್ಮೀಯ ಸ್ವಾಗತ.

ಗೌರವ ಮಾತು: ರೈತ ನಾಯಕ, ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕೀಯ ಜನಸೇವೆಯ ಹಿನ್ನೆಲೆಯಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ. ಕರುನಾಡಿನ ಹೆಮ್ಮೆಯ ನಾಯಕನಿಗೆ ಅಭಿಮಾನಪೂರ್ವಕ ಗೌರವ ಸಲ್ಲಿಸೋಣ.

  • ಸಂಗಮೇಶ ಎನ್ ಜವಾದಿ
    ಬರಹಗಾರರು, ಪತ್ರಕರ್ತರು, ಚಿಂತಕರು, ಹೋರಾಟಗಾರರು, ಪರಿಸರ ಸಂರಕ್ಷಕರು, ಬೀದರ್ ಜಿಲ್ಲೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!