ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರಗಿರಿಯಲ್ಲಿ ದಾನಮ್ಮದೇವಿ ಪುರಾಣ ಮಂಗಲ ಹಾಗೂ ಧಾರ್ಮಿಕ ಉತ್ಸವ

ಹುನಗುಂದ: ತಾಲೂಕಿನ ನಾಗೂರ ಸಮೀಪದ ಪುರ್ತಗೇರಿ (ಪುರಗಿರಿ) ಶ್ರೀಮಠದಲ್ಲಿ ಜಗದ್ಗುರು ೧೦೦೮ ಪಂಡಿತ ಕೈಲಾಸಲಿಂಗ ಶಿವಾಚಾರ್ಯ ಭಗವತ್ಪಾದರು ಹಿಮವತ್ ಕೇದಾರ ೬೫ ನೇ ಪುಣ್ಯ ಸ್ಮರಣಣೋತ್ಸವ ನಿಮಿತ್ತ ಶ್ರೀ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಹಾಗೂ ಜಗದ್ಗುರು ಪಂಡಿತ ಕೈಲಾಸ ಲಿಂಗ ಮಹಾಭಗವತ್ಪಾದರ ಜೀವನ ಚರಿತ್ರೆ ಪ್ರವಚನ ಮಂಗಲ ಕಾರ್ಯಕ್ರಮ ಇದೇ ೧೦ ರಂದು ಸಂಜೆ ೭ ಗಂಟೆಗೆ ನಡೆಯುವುದು. ಇದೇ ಸಂದರ್ಭದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಯ್ಯಾಚಾರ, ಲಿಂಗದೀಕ್ಷೆ, ಮಹಾಗಣಾರಾಧನೆ ಮತ್ತು ಪಲ್ಲಕ್ಕಿ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಚೌಳಹಿರಿಯೂರು ಡಾ.ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಚಳಗೇರಿ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಂಕಸದೊಡ್ಡಿ ವಾಮದೇವ ಶಿವಾಚಾರ್ಯ ಸ್ವಾಮೀಜಿ, ಗುರಗುಂಟಾ ಸದಾನಂದ ಶಿವಾಚಾರ್ಯ ಸ್ವಾಮೀಜಿ, ಕೂಡ್ಲಿಗಿ ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ, ದೇವರಭೂಪರ ಗಜದಂಡ ಶಿವಾಚಾರ್ಯ ಸ್ವಾಮೀಜಿ, ಕಮತಗಿ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ನಿಡಶೇಷಿ ಕರಿಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು.
ಕುಷ್ಟಗಿ ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಉದ್ಘಾಟಿಸುವರು.
ಹುನಗುಂದ ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಬಳ್ಳಾರಿ ಶಾಸಕ ನಾರಾ ಭರತರೆಡ್ಡಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಎಸ್.ಜಿ.ನಂಜಯ್ಯನಮಠ, ಅಮರೇಗೌಡ ಬಯ್ಯಾಪುರ ಮತ್ತು ಬಳ್ಳಾರಿಯ ಹಿರಿಯ ಕಾನೂನು ಅಧಿಕಾರಿ ಬಿ.ಎಸ್.ಪಾಟೀಲ ಮುಖ್ಯ ಅತಿಥಿಗಳಾಗಿರುವರು.
ಸಾಹಿತಿ ಶರಣಪ್ಪ ಜುಗೇರಿ ಮತ್ತು ಇಳಕಲ್ ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಚನ್ನಬಸಪ್ಪ ಲೆಕ್ಕಿಹಾಳ ಉಪನ್ಯಾಸ ಮಾಡುವರು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!