ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಣ್ಣ ಯಲ್ಲಪ್ಪ ನಿಧನ ಹಿನ್ನಲೆ ಕುಟುಂಬಸ್ಥರಿಗೆ ಆರ್ಥಿಕ ಧನಸಹಾಯ ಮಾಡಿದ ಶಿವಕುಮಾರ

ಬಳ್ಳಾರಿ / ಕಂಪ್ಲಿ : ಸಿಂಧೋಳ್ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿದ್ದ ಸಣ್ಣ ಯಲ್ಲಪ್ಪ ನಿಧನದ ಹಿನ್ನಲೆ ಪಟ್ಟಣದ ಎಂ.ಡಿ.ಕ್ಯಾಂಪ್ ಬಳಿಯ 22ನೇ ವಾರ್ಡಿನ ಅಲೆಮಾರಿ ಕಾಲೋನಿಯಲ್ಲಿರುವ ಅವರ ಕುಟುಂಬಸ್ಥರ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ನ್ಯಾಯ ಸಮಿತಿ ವಿಭಾಗದ ರಾಜ್ಯ ಉಪಾಧ್ಯಕ್ಷ ವೈ.ಶಿವಕುಮಾರ ಶನಿವಾರ ಭೇಟಿ ನೀಡಿ, ಸಾಂತ್ವಾನ ಹೇಳಿದ ನಂತರ ಕುಟುಂಬಕ್ಕೆ ಆರ್ಥಿಕ ಧನಸಹಾಯ ನೀಡಿದರು.
ನಂತರ ವೈ.ಶಿವಕುಮಾರ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಯಲ್ಲಪ್ಪ ಅವರು ಸಿಂಧೋಳ್ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಹಲವು ವರ್ಷಗಳಿಂದ ಅಲೆಮಾರಿ ಕುಟುಂಬಗಳ ಸೇವೆ ಮಾಡಿಕೊಂಡು ಬಂದಿದ್ದರು. ಮತ್ತು ಪ್ರತಿಯೊಂದು ಹಂತದಲ್ಲಿ ಇಲ್ಲಿನ ನಿವಾಸಿಗಳ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ. ಅವರ ಮರಣದಿಂದ ಕುಟುಂಬದ ನಿರ್ವಹಣೆ ಕಷ್ಟಕರವಾಗಿದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಅಲೆಮಾರಿ ಸಂಘ ಭರಿಸಲಿದೆ. ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಉನ್ನತ ಮಟ್ಟದಲ್ಲಿ ಬೆಳೆದು, ಕುಟುಂಬ ನಿರ್ವಹಣೆ ಜೊತೆಗೆ ಸಮಾಜದ ಅಭಿವೃದ್ಧಿ ಮುಂದಾಗಲಿ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಅರೆಅಲೆಮಾರಿ ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಪಿ.ಶಿಕಾರಿ ರಾಮು, ಮ್ಯಾದಾರ್ ಸಮಾಜದ ಅಧ್ಯಕ್ಷ ಎಂ.ಗಾಳಿಕುಮಾರ, ತಾಲೂಕು ಸುಡಗಾಡು ಸಿದ್ದರ ಸಮಾಜದ ಅಧ್ಯಕ್ಷ ಸಣ್ಣ ಹುಲುಗಪ್ಪ, ಹಕ್ಕಿಪಿಕ್ಕಿ ಅಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ಟಿ.ಬಾಬು, ಕರ್ನಾಟಕ ರಾಜ್ಯ ಸಿಂಧೋಳ್ ಸಮಾಜದ ಗೌರವಾಧ್ಯಕ್ಷ ರಾಹುಲ್ ನಾಗಪ್ಪ, ಮುಖಂಡರಾದ ಮಾರೆಪ್ಪ, ಯಲ್ಲಮ್ಮ, ದುರುಗಮ್ಮ, ನಾಗಮ್ಮ, ಕಾವೇರಿ ಸೇರಿದಂತೆ ಅಲೆಮಾರಿ ಸಮಾಜದವರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!