
ಕೊಪ್ಪಳ : ಇಂದು ಮುದುಕರು ಅಂಗಳದಲ್ಲಿ ಇದ್ದಾರೆ. ಆದರೆ ಯುವಕರು ಮನೆಯಲ್ಲಿ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26 ಸಾಲಿನ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಹೆಣ್ಣುಮಕ್ಕಳು ಓದಿದರೆ ಒಂದು ಶಾಲೆ ತೆರೆದಂತೆ. ಅಕ್ಷರ ಕಲಿತು ಹೆಣ್ಣುಮಕ್ಕಳು ಕುಟುಂಬವನ್ನು ಬಹಳ ಸರಳವಾಗಿ ನಿರ್ವಹಣೆ ಮಾಡುತ್ತಾರೆ. ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಪ್ರಾಶಸ್ತ್ಯ ಸಿಕ್ಕರೆ ದೇಶ ಸುಲಭವಾಗಿ ಅಭಿವೃದ್ಧಿ ಆಗುತ್ತದೆ. ಸಮಾನತೆ ಹೆಸರಲ್ಲಿ ಮಹಿಳೆಯರನ್ನು ಶೋಷಣೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ವಿಶ್ವವಿದ್ಯಾನಿಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ವೆಂಕಟಗಿರಿ ದಳವಾಯಿ ಮಾತನಾಡುತ್ತ ಮಹಿಳೆಯರ ಜ್ಞಾನ, ಸಾಮರ್ಥ್ಯ ಮತ್ತು ಧೈರ್ಯವನ್ನು ಸರಿಯಾಗಿ ಬಳಸಿಕೊಳ್ಳಬೇಕು, ಪ್ರಭುತ್ವವು ಮಹಿಳೆಯರು ಮೌನವಾಗಿರಬೇಕು ಎಂದು ಬಯಸುತ್ತಿವೆ. ಮಹಿಳೆಯರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ ಸಬಲೀಕಾರಣವಾಗಬೇಕು. ಮೊದಲಿಂದಲೂ ಪ್ರಭುತ್ವವು ಮಹಿಳೆಯರಿಗೆ ಅವಕಾಶಗಳು ಮತ್ತು ಜಾಗ ಕೊಟ್ಟಿಲ್ಲ. ಆದ್ದರಿಂದ ಅವರು ಕಲೆ, ಸಾಂಸ್ಕೃತಿಕ ಮತ್ತು ವಿಜ್ಞಾನದಿಂದ ದೂರವಾಗಿದ್ದಾರೆ. ಚೆರಿತ್ರೆ ರೂಪಿಸುವಾಗಿ ಮಹಿಳೆಯರನ್ನು ಮತ್ತು ಶೂದ್ರರನ್ನು ಹೊರಗೆ ಇಟ್ಟಿದ್ದಾರೆ.
ಹೆಣ್ಣನ್ನು ಕೇವಲ ಸೌಂದರ್ಯ ದೃಷ್ಟಿಕೋನದಿಂದ ನೋಡುತ್ತಿದ್ದಾರೆ. ಉನ್ನತ ಶಿಕ್ಷಣವು ವ್ಯಕ್ತಿತ್ವವನ್ನು ರೂಪಿಸುತ್ತಿವೆ. ಆದ್ದರಿಂದ ಎಲ್ಲರೂ ಉನ್ನತ ಶಿಕ್ಷಣ ಪಡೆಯುರಿ ಎಂದು ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕರಾದ ಡಾ. ಹುಲಿಗೆಮ್ಮ ಅವರು 2025-26 ಸಾಲಿನ ಕಾಲೇಜಿನ ಎಲ್ಲಾ ಘಟಕಗಳ ವಾರ್ಷಿಕ ವರದಿಯನ್ನು ಮಂಡಿಸಿದರು. ಸಹ ಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತಾ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತವೆ. ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಸರಕಾರ ಮತ್ತು
ಖಾಸಗಿ ಶಿಷ್ಯವೇತನಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ 2024-25 ಸಾಲಿನಲ್ಲಿ ಬಿ ಎಸ್ಸಿ ಭೌತಶಾಸ್ತ್ರದಲ್ಲಿ ಚಿನ್ನದ ಪದಕ ಪಡೆದ ಶ್ವೇತಾಗೆ ಸನ್ಮಾನಿಸಲಾಯಿತು. ಶ್ವೇತಾ ಕಾಲೇಜು ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು.
ಶ್ರೀಕಾಂತ್ ಅವರು ಮುಖ್ಯ ಅಥಿತಿಗಳ ಪರಿಚಯ ಮಾಡಿದರು. ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹೂ ನೀಡುವ ಮೂಲಕ ಬೀಳ್ಕೊಡಲಾಯಿತು. ವಿದ್ಯಾರ್ಥಿಗಳು ಅನಿಸಿಕೆಗಳನ್ನು ಹಂಚಿಕೊಂಡರು.
ಕ್ರೀಡೆ, ಸ್ಕೌಟ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿ ಬಿ. ಜಿ ಕರಿಗಾರ ಮತ್ತು ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ನಾಗರತ್ನ ತಮ್ಮಿನಾಳ, ಡಾ. ಪ್ರದೀಪ್ ಕುಮಾರ, ಡಾ. ನರಸಿಂಹ, ಶುಭ, ಸುಮಿತ್ರ, ಸುಮಯ್ಯ, ಶರಣಪ್ಪ ಮೂಲಿ. ಶಿವಪ್ರಸಾದ್ ಹಾದಿಮನಿ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಗಪ್ಪ ಬ್ಯಾಳಿ ನಿರೂಪಿಸಿದರು. ಡಾ. ಪ್ರಕಾಶ ಹುಲ್ಲೂರು ಸ್ವಾಗತಿಸಿದರು.
ಮೂಕಮ್ಮ ಸಂಗಡಿಗರು ಪ್ರಾರ್ಥಿಸಿದರು.
ರುದ್ರವ್ವ ಹಟ್ಟಿಹೊಳಿ ವಂದಿಸಿದರು.
- ಕರುನಾಡ ಕಂದ ಸುದ್ದಿ




















