ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಜೀರಗಾಂವ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಆರು ಕುರಿಗಳು ಸಾವು : ಮಹಿಳೆಗೆ ಗಂಭೀರ ಗಾಯ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 6 ಕುರಿಗಳು ಸಾವನಪ್ಪಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಗ್ರಾಮದ ರಶೀದ ಬೇಗಂ (48) ಅವರು ಕುರಿ ಮೇಯಿಸುತ್ತಿದ್ದ ಸಿಡಿಲು ಬಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ತಕ್ಷಣ ಕಾಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ಸೂಚಿಸಿರುವಾಗಿ ತಿಳಿದು ಬಂದಿರುತ್ತದೆ. ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಮಹಿಳೆಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಹಾಗೂ ಕಾಲುಗಳು ಸರಿಸಲು ಆಗುತ್ತಿಲ್ಲ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
ಇದೇ ವೇಳೆ ಗ್ರಾಮದ ರವಿ ಪೂಜಾರಿ ಎಂಬವರಿಗೆ ಸೇರಿದ ಆರು ಕುರಿಗಳು ಸಿಡಿಲು ಬಡಿದು ಸಾವನಪ್ಪಿರುತ್ತವೆ ಎಂದು ವರದಿಯಾಗಿದೆ.
ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸಿಗೆ ಕರೆ ಮಾಡಿದರು ಸಮಯಕ್ಕೆ ಸರಿಯಾಗಿ ವಾಹನ ಸ್ಥಳಕ್ಕೆ ಬಂದಿರುವುದಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದರು.
ಈ ಘಟನೆ ವಜೀರಗಾಂವ ಗ್ರಾಮದ ಜನರಲ್ಲಿ ಆತಂಕ ಮೂಡಿಸುತ್ತಿದೆ.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!