ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಮೂಗನೂರ ಮಠ ಕರೆ

ಬಾಗಲಕೋಟೆ : ಕುಮಾರಿ ಮಂಜುಳಾ ಮುತ್ತೂರ ಹಾಗೆ ನೀವೂ ಸಹ ಉತ್ತಮ ಶ್ರೇಣಿ ಪಡೆದುಕೊಂಡು ಮಹಾವಿದ್ಯಾಲಯ ಹಾಗೂ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಎಸ್ ಆರ್ ಮೂಗನೂರಮಠ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡುತ್ತಾ ಈ ಮಹಾವಿದ್ಯಾಲಯದಲ್ಲಿ ಜ್ಞಾನಾರ್ಜನೆ ಗೈದ ಎಲ್ಲಾ ವಿದ್ಯಾರ್ಥಿಗಳು ಮಹಾವಿದ್ಯಾಲಯದ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ, ಎಂಎ ಇಂಗ್ಲಿಷ್ ವಿಷಯದಲ್ಲಿ 2024-25ನೇ ಸಾಲಿನಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಎರಡನೇ ರಾಂಕ್ ಪಡೆದುಕೊಂಡಿದ್ದುದ್ದಕ್ಕಾಗಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಮಂಜುಳಾ ಮುತ್ತೂರ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಸಜ್ಜನರ, ಪ್ರಾಧ್ಯಾಪಕರಾದ ಪ್ರೊ ಶ್ರೀನಿವಾಸ್ ಚಿಮ್ಮಲಗಿ, ಡಾ. ಎಂ ಎಂ ಮೇಟಿ, ಡಾ. ಜಿ ಆಯ್ ನಂದಿಕೋಲಮಠ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಸೌಮ್ಯ ಬನ್ನಿಗೋಳಮಠ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಕುಮಾರಿ ಅರ್ಚನಾ ಅಂಗಡಿ ಸ್ವಾಗತಿಸಿದರು. ಮತ್ತೊಬ್ಬ ವಿದ್ಯಾರ್ಥಿ ಕುಮಾರ ಸಂತೋಷ ಕೊಡೆಕಲ್ಲ ವಂದನೆಗಳನ್ನು ಸಲ್ಲಿಸಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!