ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಸಂಜೀವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ

ರಾಯಚೂರು ಜಿಲ್ಲೆಯ ಲಿಂಗಸುಗೂರಿನ
​ಶ್ರೀ ಉಟಕನೂರು ಬಸವಲಿಂಗ ತಾತ ಶಿಕ್ಷಣ ಟ್ರಸ್ಟ್ ನ ಶ್ರೀಸಂಜೀವ ಶಿಕ್ಷಣ ಮಹಾವಿದ್ಯಾಲಯದಲ್ಲಿ ( ಬಿ.ಇಡಿ) ತೃತೀಯ ಸೆಮಿಸ್ಟರ್‌ನ ಪ್ರಶಿಕ್ಷಣಾರ್ಥಿಗಳಿಂದ ಪಠ್ಯ ಚಟುವಟಿಕೆಯ ಭಾಗವಾಗಿ ದಿನಾಂಕ: 23-05-2026 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ನಾಟಕ ಪ್ರದರ್ಶನ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಂಶಗಳನ್ನೊಳಗೊಂಡ ನಾಟಕಗಳು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.
​ಬಿ.ಇಡಿ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳು, ಪರಿಸರ ಜಾಗೃತಿ ಬಗ್ಗೆ ಅರಿವು ಮೂಡಿಸುವುದು, ಭ್ರಷ್ಟಾಚಾರ ನಿರ್ಮೂಲನೆ, ಬಾಲ್ಯವಿವಾಹ ಕಾನೂನು ಬಾಹಿರ ಮತ್ತು ವರದಕ್ಷಿಣೆ ಪಿಡುಗು ಬಗ್ಗೆ ನಾಟಕಗಳನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಎನ್.ಯು.ಬಿ.ಟಿ ಟ್ರಸ್ಟ್‌ನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಂಜೀವಕುಮಾರ್ ಕಂದಗಲ್ ರವರು ಮಾತನಾಡುತ್ತಾ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ನಾವೆಲ್ಲರೂ ನಾಟಕದ ಪಾತ್ರಧಾರಿಗಳು ಅದರಲ್ಲಿ ನಾವುಗಳು ಒಳ್ಳೆಯದನ್ನು ಆಯ್ಕೆ ಮಾಡಿಕೊಳ್ಳಬೇಕು ಅದನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್‌ ಕವಿತಾಳ , ಶ್ರೀಜಾವೀದ್ ಹುಸೇನ್ ಪ್ರಾಂಶುಪಾಲರು ಹಾಗೂ ಶ್ರೀ ಅಮರೇಶ್ ಗೌಡೂರು ಪ್ರಾಚಾರ್ಯರು ಹಾಗೂ ಉಪನ್ಯಾಸಕರುಗಳಾದ ಶ್ರೀ ವೆಂಕಟೇಶ್ ಪೂಜಾರಿ ,ಶ್ರೀ ಚನ್ನಬಸವ, ಶ್ರೀಮತಿ ಸವಿತಾ ಪವಾರ
ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ವೀರೇಶ್ , ಪ್ರಾರ್ಥನೆಯನ್ನು ಕುಮಾರಿ ಸಹನಾ ವೆಂಕಟೇಶ್ , ವಂದನಾರ್ಪಣೆಯನ್ನು ಶ್ರೀಮತಿ ನೀಲಾoಬಿಕಾ ರವರು ನೆರವೇರಿಸಿದರು.

ವರದಿ ಶ್ರೀ ವೆಂಕಟೇಶ ನವಲಕಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!