ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಸರ್ಕಾರದಿಂದ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಪರವಾನಿಗೆ ನೀಡಲಾಗಿದೆ. : ಎಚ್.ಡಿ.ರಾಜೇಶ್.

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್ ತಿಳಿಸಿದರು.
ಅವರು ಇಂದು ಪಟ್ಟಣದ ವಿವಿಧ ಕಾರ್ಯಗಳ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಾಲ್ಲೂಕಿನಲ್ಲಿ ಅಧಿಕೃತ ಮರಳು ಬ್ಲಾಕ್ ಇಲ್ಲದೇ ಇರುವುದರಿಂದ ಸರ್ಕಾರಿ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರ ಕಟ್ಟಡ ನಿರ್ಮಾಣಗಳಿಗೆ ತಿವ್ರವಾದ ತೊಂದರೆಯಾಗಿರುವ ಹಿನ್ನೆಲ್ಲೆಯಲ್ಲಿ ತುಂಗಭದ್ರಾ ನದಿ ತೀರದಲ್ಲಿ ಮರಳು ಲಭ್ಯವಿರುವ ಸ್ಥಳವನ್ನು ಕಂದಾಯ ಇಲಾಖೆಯಿಂದ ಗುರುತಿಸಲಾಗಿದ್ದು,ಅದನ್ನು ಇಂದು ಪರಿಶೀಲನೆ ಮಾಡಿದ್ದು, ತಾಲ್ಲೂಕಿನ ಸಣಾಪುರ ಗ್ರಾ.ಪಂ.ವ್ಯಾಪ್ತಿಯ ಅರಳಿಹಳ್ಳಿ ತಾಂಡದ ಸಮೀಪದಲ್ಲಿ ನದಿ ತೀರದಲ್ಲಿ ಮರಳು ಗಣಿಗಾರಿಕೆಗೆ ಪರವಾನಿಗೆಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯವರು ಸರ್ಕಾರದ ಮಾರ್ಗ ಸೂಚಿಯಂತೆ ಮರಳು ಗಣಿಗಾರಿಕೆಯನ್ನು ನಡೆಸಲಿದ್ದು, ಸರ್ಕಾರಿ ಕಾಮಗಾರಿಗಳಿಗೆ ಮರಳನ್ನು ಒದಗಿಸಲಿದ್ದಾರೆ. ಜೊತೆಗೆ ಖಾಸಗಿಯವರಿಗೂ ಸಹಿತ ಸರ್ಕಾರದ ಮಾರ್ಗ ಸೂಚಿಯಂತೆ ಮರಳನ್ನು ನೀಡಲಿದ್ದಾರೆಂದು ತಿಳಿಸಿದರು.
ಇನ್ನು ಪುರಸಭೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರಲ್ಲದೆ, ಬೀದಿ ದೀಪಗಳನ್ನು ಸರ್ಮಪಕವಾಗಿ ನಿರ್ವಹಿಸುವಂತೆ ಸೂಚಿಸಿದರಲ್ಲದೆ, ಕಳೆದ ಎರಡು ತಿಂಗಳ ಹಿಂದೆ ಹೊಡೆದಿರುವ ನೀರು ಸರಬರಾಜು ರೈಸಿಂಗ್ ಪೈಪ್ ಲೈನನ್ನು ಇನ್ನು ಎರಡು ಮೂರು ದಿನಗಳಲ್ಲಿ ಸರಿಪಡಿಸಬೇಕು. ಕುರುಗೋಡು ರಸ್ತೆಯಲ್ಲಿನ ದ್ವಿಪತ ರಸ್ತೆಗೆ ಅಳವಡಿಸಲಾಗಿರುವ ಜೋಡಿ ಬೀದಿ ದೀಪಗಳು ಉರಿಯುತ್ತಿಲ್ಲವೆನ್ನುವ ದೂರುಗಳು ಬಂದಿದ್ದು, ಅವುಗಳನ್ನು ಗುತ್ತಿಗೆದಾರರನ್ನು ಕರೆಸಿ ಸರಿಪಡಿಸಬೇಕು. ಅದನ್ನು ಪುರಸಭೆಗೆ ಹಸ್ತಾಂತರಿಸಿಕೊಳ್ಳಬೇಕು. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಬೀದಿ ದೀಪಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.
ಐತಿಹಾಸಿಕ ಸೋಮಪ್ಪನ ಕೆರೆ ದಂಡೆಯ ಮುಖ್ಯರಸ್ತೆಯ ಪಕ್ಕದಲ್ಲಿ ಅತೀಕ್ರಮಣಗೊಂಡಿದ್ದು, ಆದನ್ನು ತೆರವುಗೊಳಿಸಬೇಕು. ಪಟ್ಟಣದ ಮುಖ್ಯರಸ್ತೆಯಲ್ಲಿ ಪಾದಾಚಾರಿ ರಸ್ತೆಯನ್ನು ಅತೀಕ್ರಮಿಸಿರುವುದನ್ನು ಶೀಘ್ರವಾಗಿ ತೆರವುಗೊಳಿಸಬೇಕು ಹಾಗೂ ಸಣಾಪುರ ರಸ್ತೆಯ ಎರಡು ಬದಿಯಲ್ಲಿ ಅತೀಕ್ರಮಿಸಿರುವ ರಸ್ತೆಯನ್ನು ಶೀಘ್ರವಾಗಿ ತೆರವುಗೊಳಿಸದಿದ್ದರೆ, ಸ್ವತಃ ತಾವೆ ಇನ್ನೊಂದು ವಾರದಲ್ಲಿ ಪಟ್ಟಣಕ್ಕೆ ಆಗಮಿಸಿ ಅತೀಕ್ರಮಣಗೊಂಡ ರಸ್ತೆಯನ್ನು ತೆರವುಗೊಳಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳನ್ನು ಎಚ್ಚರಿಸಿದರು. ಒಟ್ಟಾರೆ ಪುರಸಭೆಯ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಡಚಣೆಯಾದರೆ ನಿರ್ಧಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಪಟ್ಟಣದಲ್ಲಿ ಅತಿಕ್ರಮಣಗೊಂಡ ಸ್ಥಳಗಳ ಬಗ್ಗೆ ಅತಿಕ್ರಮಿಸಿಕೊಂಡವರಿಗೆ ನೋಟೀಸುಗಳನ್ನು ನೀಡುವಂತೆಯೂ ಸೂಚಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಜೂಗಲ್ ಮಂಜುನಾಯಕ, ಕಂದಾಯ ಮತ್ತು ಪುರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!