ಕೊಡಗು : ಸಿದ್ದರಾಮಯ್ಯನವರೊಂದಿಗೆ ಗುರುತಿಸಿಕೊಂಡಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ, ಹಾಗೂ ಇದುವರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕೊಡಗಿಗೆ ಪ್ರಾತಿನಿಧ್ಯವನ್ನು ಕಾಂಗ್ರೆಸ್ ನೀಡುವುದು ಖಚಿತವಾಗಿದೆ.
ಸಿದ್ದರಾಮಯ್ಯ ಹಾಗೂ ಹೈಕಮಾಂಡ್ನಾ ಹಲವು ಪ್ರಭಾವಿ ನಾಯಕರೊಂದಿಗೆ ಹೆಚ್ಚಿನ ಒಡನಾಟ ಹೊಂದಿರುವ ಪೊನ್ನಣ್ಣನವರ ಬೇಡಿಕೆಗೆ ಹಲವರು ಈಗಾಗಲೇ ಹಸಿರು ನಿಶಾನೆ ತೋರಿಸಿದ್ದಾರೆ.
ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ಖಚಿತವಾಗಿದ್ದು ಆದರೆ ಯಾವ ಖಾತೆ ಎಂಬುದು ಇನ್ನು ನಿರ್ಧಾರವಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ವರದಿ: ಪ್ರಿತುನ್ ಪೂವಣ್ಣ




















